Virat Kohli: ಕೇವಲ 58 ರನ್​ಗಳು… ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

Virat Kohli ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 16,000, 17,000, 18,000, 19,000, 20,000, 21,000, 22,000, 23,000, 24,000, 25,000, ಮತ್ತು 26,000 ರನ್‌ಗಳನ್ನು ಪೂರೈಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇದೀಗ ಕಿಂಗ್ ಕೊಹ್ಲಿ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 14, 2024 | 12:53 PM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಸಹ ಕೇವಲ 58 ರನ್​ಗಳೊಂದಿಗೆ... ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಕೇವಲ 58 ರನ್​ಗಳ ಅವಶ್ಯಕತೆಯಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ 58 ರನ್​ಗಳನ್ನು ಬಾರಿಸಿದರೆ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 27000 ರನ್​ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.

1 / 5
ಸದ್ಯ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಸಚಿನ್ 623 ಇನ್ನಿಂಗ್ಸ್​ಗಳ (226 ಟೆಸ್ಟ್ ಇನ್ನಿಂಗ್ಸ್, 396 ಏಕದಿನ ಇನ್ನಿಂಗ್ಸ್, 1 ಟಿ20 ಇನ್ನಿಂಗ್ಸ್) ಮೂಲಕ 27 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.

2 / 5
ವಿರಾಟ್ ಕೊಹ್ಲಿ ಇದುವರೆಗೆ 591 ಇನ್ನಿಂಗ್ಸ್‌ಗಳಲ್ಲಿ 26942 ರನ್ ಗಳಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 58 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 27 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ಪಾಲಾಗಲಿದೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

3 / 5
ಈ ಪಟ್ಟಿಯಲ್ಲಿ 34357 ರನ್​ಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್​ ಕುಮಾರ ಸಂಗಾಕ್ಕರ (28016) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 27483 ರನ್​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

4 / 5
ಇನ್ನು ವಿರಾಟ್ ಕೊಹ್ಲಿ ಮುಂದಿನ 8 ಇನಿಂಗ್ಸ್​ಗಳ ಒಳಗೆ 58 ರನ್​ಗಳನ್ನು ಕಲೆಹಾಕಿ 27 ಸಾವಿರ ರನ್ ಪೂರೈಸಿದರೆ, 147 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 600 ಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 27,000 ರನ್‌ಗಳನ್ನು ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ  2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.

5 / 5
Follow us