Virat Kohli: ಕೇವಲ 58 ರನ್ಗಳು… ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
Virat Kohli ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 16,000, 17,000, 18,000, 19,000, 20,000, 21,000, 22,000, 23,000, 24,000, 25,000, ಮತ್ತು 26,000 ರನ್‌ಗಳನ್ನು ಪೂರೈಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇದೀಗ ಕಿಂಗ್ ಕೊಹ್ಲಿ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
1 / 5
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಸಹ ಕೇವಲ 58 ರನ್ಗಳೊಂದಿಗೆ... ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಕೇವಲ 58 ರನ್ಗಳ ಅವಶ್ಯಕತೆಯಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 58 ರನ್‌ಗಳನ್ನು ಬಾರಿಸಿದರೆ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 27000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ.
2 / 5
ಸದ್ಯ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಸಚಿನ್ 623 ಇನ್ನಿಂಗ್ಸ್ಗಳ (226 ಟೆಸ್ಟ್ ಇನ್ನಿಂಗ್ಸ್, 396 ಏಕದಿನ ಇನ್ನಿಂಗ್ಸ್, 1 ಟಿ20 ಇನ್ನಿಂಗ್ಸ್) ಮೂಲಕ 27 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.
3 / 5
ವಿರಾಟ್ ಕೊಹ್ಲಿ ಇದುವರೆಗೆ 591 ಇನ್ನಿಂಗ್ಸ್‌ಗಳಲ್ಲಿ 26942 ರನ್ ಗಳಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 58 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 27 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೊಹ್ಲಿ ಪಾಲಾಗಲಿದೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.
4 / 5
ಈ ಪಟ್ಟಿಯಲ್ಲಿ 34357 ರನ್ಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಕುಮಾರ ಸಂಗಾಕ್ಕರ (28016) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 27483 ರನ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
5 / 5
ಇನ್ನು ವಿರಾಟ್ ಕೊಹ್ಲಿ ಮುಂದಿನ 8 ಇನಿಂಗ್ಸ್ಗಳ ಒಳಗೆ 58 ರನ್‌ಗಳನ್ನು ಕಲೆಹಾಕಿ 27 ಸಾವಿರ ರನ್ ಪೂರೈಸಿದರೆ, 147 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 600 ಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 27,000 ರನ್‌ಗಳನ್ನು ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೊಸ ವಿಶ್ವ ದಾಖಲೆ ಕೂಡ ನಿರ್ಮಾಣವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಿಂಗ್ ಕೊಹ್ಲಿ ಬ್ಯಾಟ್ನಿಂದ ಭರ್ಜರಿ ದಾಖಲೆಯನ್ನು ನಿರೀಕ್ಷಿಸಬಹುದು.