Virat Kohli: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ
IND vs SL: ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಎರಡು ಭರ್ಜರಿ ವಿಶ್ವ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.