Virat Kohli: ವಿಶ್ವ ದಾಖಲೆಯ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ

|

Updated on: Jul 31, 2024 | 8:09 AM

IND vs SL: ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಆಗಸ್ಟ್ 2 ರಿಂದ ಶುರುವಾಗಲಿದೆ. ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಎರಡು ಭರ್ಜರಿ ವಿಶ್ವ ದಾಖಲೆ ಬರೆಯುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ (Virat Kohli) ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಗಸ್ಟ್ 2 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ವಿಶೇಷ ಎಂದರೆ ಇದೇ ಸರಣಿ ಮೂಲಕ ಎರಡು ವಿಶ್ವ ದಾಖಲೆಗಳನ್ನು ಬರೆಯುವ ಅವಕಾಶ ಕಿಂಗ್ ಕೊಹ್ಲಿ ಮುಂದಿದೆ.

2 / 5
ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 152 ರನ್​ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಪೂರೈಸಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯಬಹುದು.

3 / 5
ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 14 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಸದ್ಯ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಕ್ರಿಕೆಟ್ ದೇವರು ಒಟ್ಟು 350 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರು. ಆದರೀಗ ಈ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 57 ಪಂದ್ಯಗಳ ಅವಕಾಶವಿದೆ.

4 / 5
ಅಂದರೆ ಏಕದಿನ ಕ್ರಿಕೆಟ್​ನಲ್ಲಿ 292 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈಗಾಗಲೇ 13848 ರನ್ ಪೇರಿಸಿದ್ದಾರೆ. ಹೀಗಾಗಿ ಮುಂದಿನ 57 ಪಂದ್ಯಗಳಲ್ಲಿ ಒಟ್ಟು 152 ರನ್ ಬಾರಿಸಿದರೂ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗುವುದು ಖಚಿತ.

5 / 5
ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ ಬ್ಯಾಟರ್​ಗಳ ಪಟ್ಟಿಗೆ ಸೇರ್ಪಡೆಗೊಳ್ಳಲು ಕೊಹ್ಲಿಗೆ ಬೇಕಿರುವುದು ಕೇವಲ 116 ರನ್​ಗಳು ಮಾತ್ರ. ಶ್ರೀಲಂಕಾ ವಿರುದ್ಧ 116 ರನ್ ಕಲೆಹಾಕಿದರೆ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ 27 ಸಾವಿರ ರನ್ ಪೂರೈಸಿದ 4ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಬ್ಯಾಟ್​ನಿಂದ ಎರಡು ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.