- Kannada News Photo gallery Cricket photos Virat Kohli New Haircut: Virat Kohli gets NEW Trendy look with New Haricut
Virat Kohli: ಹೊಸ ಹೇರ್ ಸ್ಟೈಲ್ನಲ್ಲಿ ಕಾಣಿಸಿಕೊಂಡ ಕಿಂಗ್ ಕೊಹ್ಲಿ
Virat Kohli New Haircut: ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ 5 ಪಂದ್ಯಗಳಲ್ಲಿ ಎರಡು ಅರ್ಧ ಶತಕ ಮತ್ತು ಒಂದು ಶತಕದ ನೆರವಿನಿಂದ ಒಟ್ಟು 276 ರನ್ ಕಲೆಹಾಕಿದ್ದರು.
Updated on:Sep 18, 2022 | 1:33 PM

ಏಷ್ಯಾಕಪ್ ಮೂಲಕ ಭರ್ಜರಿ ಫಾರ್ಮ್ಗೆ ಮರಳಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಲುಕ್ ಅನ್ನೇ ಬದಲಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಹೇರ್ ಸ್ಟ್ರೈಲ್ ಮಾಡಿಕೊಂಡಿರುವ ಕೊಹ್ಲಿ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ 5 ಪಂದ್ಯಗಳಲ್ಲಿ ಎರಡು ಅರ್ಧ ಶತಕ ಮತ್ತು ಒಂದು ಶತಕದ ನೆರವಿನಿಂದ ಒಟ್ಟು 276 ರನ್ ಕಲೆಹಾಕಿದ್ದರು. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಪಂದ್ಯದಲ್ಲಿ ಕೇವಲ 61 ಎಸೆತಗಳಲ್ಲಿ ಅಜೇಯ 122 ರನ್ ಬಾರಿಸಿ 3 ವರ್ಷಗಳ ಶತಕದ ಬರವನ್ನು ನೀಗಿಸಿದ್ದರು.

ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿರುವ ಕೊಹ್ಲಿ ತಮ್ಮ ಹಳೆಯ ಫಾರ್ಮ್ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ನಲ್ಲೂ ಅಬ್ಬರಿಸುವ ಇರಾದೆಯಲ್ಲಿದ್ದಾರೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿ 3 ವರ್ಷಗಳ ಬಳಿಕ ಬಾರಿಸುವ ಮೂಲಕ ತಮ್ಮ ಹಳೆಯ ಖದರ್ಗೆ ಮರಳಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲೂ ಕಿಂಗ್ ಕೊಹ್ಲಿಯೇ ಟ್ರಂಪ್ ಕಾರ್ಡ್ ಆಗಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು T20 ಪಂದ್ಯಗಳ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ಸೆಪ್ಟೆಂಬರ್ 20 ರಿಂದ ಶುರುವಾಗಲಿದೆ. 2ನೇ ಪಂದ್ಯವು ಸೆಪ್ಟೆಂಬರ್ 23 ರಂದು ನಾಗ್ಪುರದಲ್ಲಿ ನಡೆಯಲಿದ್ದು, ಮೂರನೇ ಟಿ20 ಪಂದ್ಯ ಹೈದರಾಬಾದ್ನಲ್ಲಿ ನಡೆಯಲಿದೆ.
Published On - 1:30 pm, Sun, 18 September 22




