Virat Kohli: ಹೊಸ ಹೇರ್​ ಸ್ಟೈಲ್​ನಲ್ಲಿ ಕಾಣಿಸಿಕೊಂಡ ಕಿಂಗ್ ಕೊಹ್ಲಿ

Virat Kohli New Haircut: ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ 5 ಪಂದ್ಯಗಳಲ್ಲಿ ಎರಡು ಅರ್ಧ ಶತಕ ಮತ್ತು ಒಂದು ಶತಕದ ನೆರವಿನಿಂದ ಒಟ್ಟು 276 ರನ್ ಕಲೆಹಾಕಿದ್ದರು.

Sep 18, 2022 | 1:33 PM
TV9kannada Web Team

| Edited By: Zahir PY

Sep 18, 2022 | 1:33 PM

ಏಷ್ಯಾಕಪ್ ಮೂಲಕ ಭರ್ಜರಿ ಫಾರ್ಮ್​ಗೆ ಮರಳಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಲುಕ್​ ಅನ್ನೇ ಬದಲಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಹೇರ್​ ಸ್ಟ್ರೈಲ್ ಮಾಡಿಕೊಂಡಿರುವ ಕೊಹ್ಲಿ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

1 / 5
ವಿರಾಟ್ ಕೊಹ್ಲಿ ಏಷ್ಯಾಕಪ್‌ನಲ್ಲಿ 5 ಪಂದ್ಯಗಳಲ್ಲಿ ಎರಡು ಅರ್ಧ ಶತಕ ಮತ್ತು ಒಂದು ಶತಕದ ನೆರವಿನಿಂದ ಒಟ್ಟು 276 ರನ್ ಕಲೆಹಾಕಿದ್ದರು. ಅದರಲ್ಲೂ ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಪಂದ್ಯದಲ್ಲಿ ಕೇವಲ 61 ಎಸೆತಗಳಲ್ಲಿ ಅಜೇಯ 122 ರನ್ ಬಾರಿಸಿ 3 ವರ್ಷಗಳ ಶತಕದ ಬರವನ್ನು ನೀಗಿಸಿದ್ದರು.

2 / 5
ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿರುವ ಕೊಹ್ಲಿ ತಮ್ಮ ಹಳೆಯ ಫಾರ್ಮ್​ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲೂ ಅಬ್ಬರಿಸುವ ಇರಾದೆಯಲ್ಲಿದ್ದಾರೆ.

3 / 5
ವಿಶೇಷ ಎಂದರೆ ವಿರಾಟ್ ಕೊಹ್ಲಿ 3 ವರ್ಷಗಳ ಬಳಿಕ ಬಾರಿಸುವ ಮೂಲಕ ತಮ್ಮ ಹಳೆಯ ಖದರ್​ಗೆ ಮರಳಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ ಅತ್ಯುತ್ತಮ ಸ್ಟ್ರೈಕ್​ ರೇಟ್ ಹೊಂದಿದ್ದಾರೆ. ಹೀಗಾಗಿ ಆಸೀಸ್ ವಿರುದ್ಧದ ಸರಣಿಯಲ್ಲೂ ಕಿಂಗ್ ಕೊಹ್ಲಿಯೇ ಟ್ರಂಪ್ ಕಾರ್ಡ್ ಆಗಲಿದ್ದಾರೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು T20 ಪಂದ್ಯಗಳ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ಸೆಪ್ಟೆಂಬರ್ 20 ರಿಂದ ಶುರುವಾಗಲಿದೆ. 2ನೇ ಪಂದ್ಯವು ಸೆಪ್ಟೆಂಬರ್ 23 ರಂದು ನಾಗ್ಪುರದಲ್ಲಿ ನಡೆಯಲಿದ್ದು, ಮೂರನೇ ಟಿ20 ಪಂದ್ಯ ಹೈದರಾಬಾದ್​ನಲ್ಲಿ ನಡೆಯಲಿದೆ.

5 / 5

Follow us on

Most Read Stories

Click on your DTH Provider to Add TV9 Kannada