Virat Kohli Record: ಮೊದಲ ಪಂದ್ಯದಲ್ಲೇ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Apr 02, 2023 | 11:59 PM

Virat Kohli New Record: ಮುಂಬೈ ಇಂಡಿಯನ್ಸ್ ವಿರುದ್ಧ 49 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದಾರೆ.

1 / 8
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ 172 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಭರ್ಜರಿ ಆರಂಭ ಒದಗಿಸಿದ್ದರು.

2 / 8
ಅಲ್ಲದೆ ಕೇವಲ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ ಗಳಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಅಲ್ಲದೆ 50+ ಸ್ಕೋರ್​ಗಳ ವಿಷಯದಲ್ಲೂ ಕಿಂಗ್ ಕೊಹ್ಲಿ ಅರ್ಧಶತಕ ಪೂರೈಸಿದ್ದಾರೆ.

3 / 8
ಅಂದರೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಇದುವರೆಗೆ  45 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ 5 ಶತಕ ಸಿಡಿಸಿದ್ದಾರೆ. ಈ ಮೂಲಕ ಒಟ್ಟು 50 ಬಾರಿ 50 ಪ್ಲಸ್ ರನ್​ಗಳಿಸಿ ಮಿಂಚಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್.

4 / 8
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ ಐಪಿಎಲ್​ನಲ್ಲಿ ಒಟ್ಟು 60 ಬಾರಿ 50+ ಸ್ಕೋರ್​ಗಳಿಸಿ ಮಿಂಚಿದ್ದಾರೆ.

5 / 8
ಹಾಗೆಯೇ ಶಿಖರ್ ಧವನ್ 49 ಬಾರಿ ಐವತ್ತಕ್ಕೂ ಅಧಿಕ ರನ್​ಗಳಿಸಿ ಬ್ಯಾಟ್ ಮೇಲೆತ್ತಿದ್ದರು.

6 / 8
ಇನ್ನು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಕೂಡ ಈ ಪಟ್ಟಿಯಲ್ಲಿದ್ದು, ಎಬಿಡಿ ಒಟ್ಟು 43 ಬಾರಿ 50+ ಸ್ಕೋರ್​ಗಳಿಸಿದ್ದಾರೆ.

7 / 8
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 41 ಬಾರಿ 50 ಪ್ಲಸ್ ಸ್ಕೋರ್​ಗಳಿಸುವ ಮೂಲಕ ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.

8 / 8
ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ 49 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ 50+ ಸ್ಕೋರ್​ಗಳಿಕೆಯಲ್ಲೂ ಅರ್ಧಶತಕ ಪೂರೈಸಿದ್ದಾರೆ.

Published On - 11:58 pm, Sun, 2 April 23