AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕ್ರಿಕೆಟ್ ಇತಿಹಾಸದಲ್ಲೇ ಹೊಸ ಸಾಧನೆ ಮಾಡಿದ ವಿರಾಟ್ ಕೊಹ್ಲಿ

Virat Kohli New Record: ವಿಶೇಷ ಎಂದರೆ ಕೊಹ್ಲಿ ಹೀಗೆ 2 ತಂಡಗಳ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಲ ತಂಡಗಳ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

TV9 Web
| Edited By: |

Updated on:Jan 11, 2023 | 10:09 PM

Share
ಶ್ರೀಲಂಕಾ ವಿರುದ್ಧ ಭರ್ಜರಿ ಶತಕ (113) ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೊಂದು ಒಂದೇ ತಂಡದ ವಿರುದ್ಧ ಅತ್ಯಧಿಕದ ದಾಖಲೆ. ಅಂದರೆ ತಂಡವೊಂದರ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಗಳು ಇದೀಗ ವಿರಾಟ್ ಕೊಹ್ಲಿಯ ಪಾಲಾಗಿದೆ.

1 / 6
ವಿಶೇಷ ಎಂದರೆ ಕೊಹ್ಲಿ ಹೀಗೆ 2 ತಂಡಗಳ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಲ ತಂಡಗಳ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಆದರೀಗ ಮಾಸ್ಟರ್ ಬ್ಲಾಸ್ಟರ್ ಅವರನ್ನೇ ಹಿಂದಿಕ್ಕಿ ವಿರಾಟ್ ಕೊಹ್ಲಿ ಕಿಂಗ್ ಎನಿಸಿಕೊಂಡಿದ್ದಾರೆ.

2 / 6
ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಶ್ರೀಲಂಕಾ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಕೊಹ್ಲಿಯ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ 8 ಸೆಂಚುರಿ ಬಾರಿಸಿದ ಸಚಿನ್ ಹೆಸರಿನಲ್ಲಿತ್ತು. ಇದೀಗ ಕೊಹ್ಲಿ 9 ಶತಕ ಸಿಡಿಸುವ ಮೂಲಕ ಹೊಸ ವರ್ಲ್ಡ್ ರೆಕಾರ್ಡ್ ಬರೆದಿದ್ದಾರೆ.

3 / 6
ಕಿಂಗ್ ಕೊಹ್ಲಿ ಇಂತಹದೊಂದು ಸಾಧನೆ ಮಾಡಿರುವುದು 2 ತಂಡಗಳ ವಿರುದ್ಧ ಎಂಬುದು ವಿಶೇಷ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧ ಕೂಡ ವಿರಾಟ್ 9 ಏಕದಿನ ಶತಕ ಬಾರಿಸಿದ್ದಾರೆ. ಈ ಮೂಲಕ ಎರಡು ತಂಡಗಳ ವಿರುದ್ಧ 9 ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಅಂದರೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ 2 ತಂಡಗಳ ವಿರುದ್ಧವೇ ಯಾವುದೇ ಬ್ಯಾಟ್ಸ್​ಮನ್ 18 ಶತಕ ಬಾರಿಸಿಲ್ಲ. ಇಂತಹದೊಂದು ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ.

4 / 6
ಇನ್ನು ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ 9 ಶತಕ ಬಾರಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 8 ಶತಕಗಳಿಸಿರುವ ಕೊಹ್ಲಿ ಮುಂಬರುವ ದಿನಗಳಲ್ಲಿ 1 ಸೆಂಚುರಿ ಸಿಡಿಸಿದರೆ ಮಾಸ್ಟರ್ ಬ್ಲಾಸ್ಟರ್ ಅವರ ದಾಖಲೆಯನ್ನೂ ಕೂಡ ಸರಿಗಟ್ಟಲಿದ್ದಾರೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ವಿರುದ್ಧ ಕೂಡ ಕೊಹ್ಲಿ 8 ಶತಕ ಬಾರಿಸಿದ್ದು, ಈ ಮೂಲಕ ನಾಲ್ಕು ರಾಷ್ಟ್ರಗಳ ವಿರುದ್ಧ 9 ಶತಕ ಬಾರಿಸಿದ ವಿಶೇಷ ವಿಶ್ವ ದಾಖಲೆಯನ್ನೂ ನಿರ್ಮಿಸುವ ಅವಕಾಶ ಕೂಡ ಕೊಹ್ಲಿ ಮುಂದಿದೆ.

5 / 6
ಒಟ್ಟಿನಲ್ಲಿ ಶತಕದ ಮೇಲೆ ಶತಕ ಬಾರಿಸುತ್ತಾ ಇದೀಗ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 45 ಶತಕ ಪೂರೈಸಿದ್ದು, ಇನ್ನು 5 ಶತಕ ಮೂಡಿಬಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಲಿದೆ.

6 / 6

Published On - 10:07 pm, Wed, 11 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್