Virat Kohli: ಕ್ರಿಕೆಟ್ ಇತಿಹಾಸದಲ್ಲೇ ಹೊಸ ಸಾಧನೆ ಮಾಡಿದ ವಿರಾಟ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Jan 11, 2023 | 10:09 PM
Virat Kohli New Record: ವಿಶೇಷ ಎಂದರೆ ಕೊಹ್ಲಿ ಹೀಗೆ 2 ತಂಡಗಳ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಲ ತಂಡಗಳ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
1 / 6
ಶ್ರೀಲಂಕಾ ವಿರುದ್ಧ ಭರ್ಜರಿ ಶತಕ (113) ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೊಂದು ಒಂದೇ ತಂಡದ ವಿರುದ್ಧ ಅತ್ಯಧಿಕದ ದಾಖಲೆ. ಅಂದರೆ ತಂಡವೊಂದರ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಗಳು ಇದೀಗ ವಿರಾಟ್ ಕೊಹ್ಲಿಯ ಪಾಲಾಗಿದೆ.
2 / 6
ವಿಶೇಷ ಎಂದರೆ ಕೊಹ್ಲಿ ಹೀಗೆ 2 ತಂಡಗಳ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕೆಲ ತಂಡಗಳ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ವಿಶ್ವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಆದರೀಗ ಮಾಸ್ಟರ್ ಬ್ಲಾಸ್ಟರ್ ಅವರನ್ನೇ ಹಿಂದಿಕ್ಕಿ ವಿರಾಟ್ ಕೊಹ್ಲಿ ಕಿಂಗ್ ಎನಿಸಿಕೊಂಡಿದ್ದಾರೆ.
3 / 6
ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಶ್ರೀಲಂಕಾ ವಿರುದ್ಧ ಏಕದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ವಿಶ್ವ ದಾಖಲೆ ಕೊಹ್ಲಿಯ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ 8 ಸೆಂಚುರಿ ಬಾರಿಸಿದ ಸಚಿನ್ ಹೆಸರಿನಲ್ಲಿತ್ತು. ಇದೀಗ ಕೊಹ್ಲಿ 9 ಶತಕ ಸಿಡಿಸುವ ಮೂಲಕ ಹೊಸ ವರ್ಲ್ಡ್ ರೆಕಾರ್ಡ್ ಬರೆದಿದ್ದಾರೆ.
4 / 6
ಕಿಂಗ್ ಕೊಹ್ಲಿ ಇಂತಹದೊಂದು ಸಾಧನೆ ಮಾಡಿರುವುದು 2 ತಂಡಗಳ ವಿರುದ್ಧ ಎಂಬುದು ವಿಶೇಷ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧ ಕೂಡ ವಿರಾಟ್ 9 ಏಕದಿನ ಶತಕ ಬಾರಿಸಿದ್ದಾರೆ. ಈ ಮೂಲಕ ಎರಡು ತಂಡಗಳ ವಿರುದ್ಧ 9 ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 2 ತಂಡಗಳ ವಿರುದ್ಧವೇ ಯಾವುದೇ ಬ್ಯಾಟ್ಸ್ಮನ್ 18 ಶತಕ ಬಾರಿಸಿಲ್ಲ. ಇಂತಹದೊಂದು ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ.
5 / 6
ಇನ್ನು ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ 9 ಶತಕ ಬಾರಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 8 ಶತಕಗಳಿಸಿರುವ ಕೊಹ್ಲಿ ಮುಂಬರುವ ದಿನಗಳಲ್ಲಿ 1 ಸೆಂಚುರಿ ಸಿಡಿಸಿದರೆ ಮಾಸ್ಟರ್ ಬ್ಲಾಸ್ಟರ್ ಅವರ ದಾಖಲೆಯನ್ನೂ ಕೂಡ ಸರಿಗಟ್ಟಲಿದ್ದಾರೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ವಿರುದ್ಧ ಕೂಡ ಕೊಹ್ಲಿ 8 ಶತಕ ಬಾರಿಸಿದ್ದು, ಈ ಮೂಲಕ ನಾಲ್ಕು ರಾಷ್ಟ್ರಗಳ ವಿರುದ್ಧ 9 ಶತಕ ಬಾರಿಸಿದ ವಿಶೇಷ ವಿಶ್ವ ದಾಖಲೆಯನ್ನೂ ನಿರ್ಮಿಸುವ ಅವಕಾಶ ಕೂಡ ಕೊಹ್ಲಿ ಮುಂದಿದೆ.
6 / 6
ಒಟ್ಟಿನಲ್ಲಿ ಶತಕದ ಮೇಲೆ ಶತಕ ಬಾರಿಸುತ್ತಾ ಇದೀಗ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ 45 ಶತಕ ಪೂರೈಸಿದ್ದು, ಇನ್ನು 5 ಶತಕ ಮೂಡಿಬಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಲಿದೆ.
Published On - 10:07 pm, Wed, 11 January 23