- TV9 Kannada Kannada News Photos Cricket Photos Virat Kohli's Big Chance: First ODI Man of the Match Award in New Zealand?
ನ್ಯೂಜಿಲೆಂಡ್ ನೆಲದಲ್ಲಿ ಕೊಹ್ಲಿಗೆ ವಿಶೇಷ ದಾಖಲೆ ಬರೆಯುವ ಅವಕಾಶ..!
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆ ನಿರ್ಮಿಸಲು ಸಜ್ಜಾಗಿದ್ದಾರೆ. ಅವರು ನ್ಯೂಜಿಲೆಂಡ್ ನೆಲದಲ್ಲಿ ತಮ್ಮ ಮೊದಲ ಏಕದಿನ ಪಂದ್ಯಶ್ರೇಷ್ಠ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದ್ದಾರೆ. ಈ ಸಾಧನೆ ಮಾಡಿದರೆ, SENA ದೇಶಗಳಲ್ಲಿ ಎಲ್ಲೆಡೆ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ನಾಲ್ಕನೇ ಭಾರತೀಯರಾಗಲಿದ್ದಾರೆ. ಮುಂಬರುವ ವಿಶ್ವಕಪ್‌ಗೆ ಭಾರತದ ಸಿದ್ಧತೆಗೂ ಈ ಸರಣಿ ಮಹತ್ವದ್ದಾಗಿದೆ.
Updated on: Oct 19, 2026 | 9:51 PM

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸೃಷ್ಟಿಸಿರುವ ದಾಖಲೆಗಳಿಗೆ ಲೆಕ್ಕವಿಲ್ಲ. ಇದೀಗ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮತ್ತೊಂದು ವಿಶೇಷ ದಾಖಲೆ ನಿರ್ಮಿಸುವ ಅವಕಾಶ ಕೊಹ್ಲಿ ಮುಂದಿದೆ. ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ನವೆಂಬರ್ 4ರಿಂದ ಭಾರತ ತಂಡ ಏಕದಿನ ಸರಣಿಯನ್ನಾಡಲಿದ್ದು, ಈ ಸರಣಿಯಲ್ಲಿ ಕೊಹ್ಲಿ ನ್ಯೂಜಿಲೆಂಡ್ ನೆಲದಲ್ಲಿ ತಮ್ಮ ಮೊದಲ ಏಕದಿನ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆಲ್ಲುವ ಗುರಿ ಹೊಂದಿದ್ದಾರೆ(PC-PTI).

ಒಂದು ವೇಳೆ ಕೊಹ್ಲಿ ಈ ಸಾಧನೆ ಮಾಡಿದರೆ, ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಮತ್ತು ಕಪಿಲ್ ದೇವ್ ಅವರಂತಹ ದಿಗ್ಗಜರ ವಿಶೇಷ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಸಿದ್ಧತೆ ಮಾಡಿಕೊಳ್ಳುವ ದೃಷ್ಟಿಯಿಂದಲೂ ಈ ಸರಣಿ ಭಾರತ ತಂಡಕ್ಕೆ ಬಹಳ ಮುಖ್ಯವಾಗಿದೆ(PC-PTI).

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟು 45 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ ವಿಶ್ವಮಟ್ಟದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಸನತ್ ಜಯಸೂರ್ಯ 48 ಪ್ರಶಸ್ತಿಗಳನ್ನು ಗೆದ್ದಿದ್ದರೆ, ಭಾರತದ ಸಚಿನ್ ತೆಂಡೂಲ್ಕರ್ 62 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ(PC-PTI).

ಆದರೆ, ಕ್ರಿಕೆಟ್‌ನಲ್ಲಿ SENA ದೇಶಗಳೆಂದು ಕರೆಯಲಾಗುವ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಕೊಹ್ಲಿ ನ್ಯೂಜಿಲೆಂಡ್ ನೆಲದಲ್ಲಿ ಮಾತ್ರ ಈವರೆಗೆ ಏಕದಿನ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ. ಹೀಗಾಗಿ, ಮುಂಬರುವ ಐದು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಈ ಪ್ರಶಸ್ತಿ ಗೆದ್ದರೆ, ಈ ನಾಲ್ಕೂ ದೇಶಗಳಲ್ಲಿ ಏಕದಿನ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ(PC-PTI).

ನ್ಯೂಜಿಲೆಂಡ್ ನೆಲದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಲ್ಲಿ ಆಡಿರುವ 13 ಪಂದ್ಯಗಳಿಂದ 596 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಸರಾಸರಿ 49.96 ಆಗಿದ್ದು, ಸ್ಟ್ರೈಕ್ ರೇಟ್ 91.41 ಇದೆ. ಈ ಅವಧಿಯಲ್ಲಿ ಒಂದು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ, ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ತಮ್ಮ ಮೊದಲ ಏಕದಿನ ಪಂದ್ಯಶ್ರೇಷ್ಠ ಪ್ರಶಸ್ತಿ ಗೆಲ್ಲಲು ಕೊಹ್ಲಿಗೆ ಉತ್ತಮ ಅವಕಾಶವಿದೆ(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



