ನೋ ನಿವೃತ್ತಿ… ಇನ್ನೊಂದು ಮೂರು ವರ್ಷ ಕಣದಲ್ಲಿ ವಿರಾಟ್ ಕೊಹ್ಲಿ
Virat Kohli Retirement Plan: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದರು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿದು ಬಂದಿದೆ. ಅಂದರೆ ಮುಂದಿನ ಏಕದಿನ ವಿಶ್ವಕಪ್ ಗೆಲ್ಲುವ ಮೂಲಕ ಕೊಹ್ಲಿ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸುವ ಇರಾದೆಯಲ್ಲಿದ್ದಾರೆ.