ಜೂನ್ 4, 2024 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನ ಟಿ20 ವಿಶ್ವಕಪ್ನಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಹೊರಗಿಡಲಾಗಿದೆ. ಇದೇ ಕಾರಣದಿಂದಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಕೊಹ್ಲಿಯನ್ನು ಪರಿಗಣಿಸಲಾಗಿಲ್ಲ ಎಂದು ವರದಿಯಾಗಿದೆ.
ಇತ್ತೀಚೆಗೆ ಮುಂಬೈನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಅವರಿಗೆ ಅವಕಾಶ ನೀಡಲು ಆಯ್ಕೆದಾರರ ಒಲವು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವಿರಾಟ್ ಕೊಹ್ಲಿಯೊಂದಿಗೆ ಬಿಸಿಸಿಐ ಆಯ್ಕೆ ಸಮಿತಿ ಶೀಘ್ರದಲ್ಲೇ ಮಾತುಕತೆ ನಡೆಸಲಿದ್ದು, ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿ ಬಳಿಕ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ವಿರುದ್ಧ ಸರಣಿ ಆಡಲಿದೆ. ಈ ಸರಣಿಗೆ ಆಯ್ಕೆಯಾಗುವ ಆಟಗಾರರೇ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಮತ್ತೊಂದೆಡೆ ರೋಹಿತ್ ಶರ್ಮಾ ಹಾಗೂ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ಆಡಲು ಆಸಕ್ತಿ ತೋರಿದ್ದು, ಬಿಸಿಸಿಐ ಆಯ್ಕೆ ಸಮಿತಿ ಕೂಡ ಅದಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಒಟ್ಟಿನಲ್ಲಿ ಏಕದಿನ ವಿಶ್ವಕಪ್ನಲ್ಲಿ ರನ್ ಸರದಾರನಾಗಿ ಮಿಂಚಿದ್ದ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಭವಿಷ್ಯ ಶೀಘ್ರದಲ್ಲೇ ನಿರ್ಧಾರವಾಗಲಿದಂತು ನಿಜ.
Published On - 11:07 pm, Thu, 7 December 23