Sign In

By signing in or creating an account, you agree with Associated Broadcasting Company's Terms & Conditions and Privacy Policy.

334*… ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ರಚಿಸಿದ ವಿರಾಟ್ ಕೊಹ್ಲಿ

Virat Kohli Records: ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ 300 ಪಂದ್ಯಗಳನ್ನು ಪೂರೈಸಿದ್ದಾರೆ. ಈ ಪಂದ್ಯದ ಮೂಲಕವೇ ಕಿಂಗ್ ಕೊಹ್ಲಿ ಹೊಸ ಇತಿಹಾಸವನ್ನು ಸಹ ರಚಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Mar 03, 2025 | 12:18 PM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಆದರೆ ಈ ಬಾರಿ ದಾಖಲೆ ನಿರ್ಮಿಸಿದ್ದು ಬ್ಯಾಟ್​ನಿಂದಲ್ಲ. ಬದಲಾಗಿ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ. ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 249 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಟ್ ಹೆನ್ರಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಈ ಕ್ಯಾಚ್​ನೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಭಾರತದ ಪರ 504 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಒಟ್ಟು 333 ಕ್ಯಾಚ್​ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ.

3 / 5
ಟೀಮ್ ಇಂಡಿಯಾ ಪರ 548 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈವರೆಗೆ 334 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಹಾಗೂ ವಿಶ್ವದ 5ನೇ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.

4 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮಹೇಲ ಜಯವರ್ಧನೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 652 ಪಂದ್ಯಗಳನ್ನಾಡಿರುವ ಜಯವರ್ಧನೆ ಒಟ್ಟು 440 ಕ್ಯಾಚ್​ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ. ಈ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

5 / 5

Published On - 10:55 am, Mon, 3 March 25

Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್

ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ

ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ

ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್

18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್

ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ