- Kannada News Photo gallery Cricket photos Virat Kohli Set to Break Indian ODI Catch Record vs Pakistan
IND vs PAK: ಭಾರತದ ಪರ ಇತಿಹಾಸ ಸೃಷ್ಟಿಸಿಲು ಕೊಹ್ಲಿಗೆ ಬೇಕಿದೆ ಇನ್ನೊಂದು ಬಲಿ
Virat Kohli ODI record: ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಒಂದು ಕ್ಯಾಚ್ ಹಿಡಿದರೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ಭಾರತೀಯ ಆಟಗಾರನೆಂಬ ದಾಖಲೆ ಬರೆಯಲಿದ್ದಾರೆ. ಅವರು ಪ್ರಸ್ತುತ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಜೊತೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಈ ದಾಖಲೆಯನ್ನು ಮುರಿಯಲು ಕೊಹ್ಲಿಗೆ ಕೇವಲ ಒಂದು ಕ್ಯಾಚ್ ಸಾಕು.
Updated on: Feb 22, 2025 | 8:39 PM

ವಿಶ್ವ ಕ್ರಿಕೆಟ್ನ ರನ್ ಮಷಿನ್ ವಿರಾಟ್ ಕೊಹ್ಲಿ ಕಳೆದು ಕೆಲವು ದಿನಗಳಿಂದ ಸ್ಥಿರ ಲಯದಲ್ಲಿಲ್ಲ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಕ್ರೀಸ್ಗೆ ಇಳಿದಾಗಲೆಲ್ಲ ರನ್ಗಳ ಮಳೆಗರೆಯುತ್ತಿದ್ದ ಕೊಹ್ಲಿಗೆ ಇತ್ತೀಚ್ಚಿನ ದಿನಗಳಲ್ಲಿ ಹೆಚ್ಚು ಸಮಯ ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಆದಾಗ್ಯೂ ಪಾಕ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅಬ್ಬರಿಸುವ ನಿರೀಕ್ಷೆಯಿದೆ. ಇದರ ಹೊರತಾಗಿಯೂ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿದ್ದಾರೆ.

ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಒಂದೇ ಒಂದು ಕ್ಯಾಚ್ ಹಿಡಿದರೂ ಸಾಕು ಅವರ ಹೆಸರಿನಲ್ಲಿ ದೊಡ್ಡ ದಾಖಲೆಯೊಂದು ದಾಖಲಾಗುತ್ತದೆ. ಇದರೊಂದಿಗೆ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಮೊದಲ ಭಾರತೀಯ ಆಟಗಾರನಾಗಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದವರ ಪಟ್ಟಿಯಲ್ಲಿ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ವಿರಾಟ್ ಕೊಹ್ಲಿ ಪ್ರಸ್ತುತ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ಅಜರುದ್ದೀನ್ 334 ಏಕದಿನ ಪಂದ್ಯಗಳಲ್ಲಿ 156 ಕ್ಯಾಚ್‌ಗಳನ್ನು ಹಿಡಿದಿದ್ದರೆ, ವಿರಾಟ್ 156 ಕ್ಯಾಚ್‌ಗಳನ್ನು (298 ಪಂದ್ಯಗಳು) ಹಿಡಿದಿದ್ದಾರೆ.

ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ಕ್ಯಾಚ್ ಹಿಡಿಯುವ ಮೂಲಕ ವಿರಾಟ್ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಲಿದ್ದಾರೆ.ಇದರ ಜೊತೆಗೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರನ್ನು ಹಿಂದಿಕ್ಕಲ್ಲಿದ್ದಾರೆ.

ಈ ವಿಷಯದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೂರನೇ ಸ್ಥಾನದಲ್ಲಿದ್ದಾರೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 140 ಕ್ಯಾಚ್‌ಗಳನ್ನು ಹಿಡಿದಿದ್ದರು. ನಾಲ್ಕನೇ ಸ್ಥಾನದಲ್ಲಿರುವ ರಾಹುಲ್ ದ್ರಾವಿಡ್ ಈ ಅವಧಿಯಲ್ಲಿ 340 ಏಕದಿನ ಪಂದ್ಯಗಳನ್ನು ಆಡಿದ್ದು 124 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

ಸುರೇಶ್ ರೈನಾ ಅವರ ಹೆಸರು ಐದನೇ ಸ್ಥಾನದಲ್ಲಿದ್ದು, ರೈನಾ 226 ಪಂದ್ಯಗಳಲ್ಲಿ 102 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಸೌರವ್ ಗಂಗೂಲಿ 311 ಏಕದಿನ ಪಂದ್ಯಗಳಲ್ಲಿ 99 ಕ್ಯಾಚ್‌ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ. ಏಳನೇ ಸ್ಥಾನದಲ್ಲಿದ್ದರು ರೋಹಿತ್ ಇದುವರೆಗೆ 269 ಪಂದ್ಯಗಳಲ್ಲಿ 96 ವಿಕೆಟ್‌ಗಳನ್ನು ಪಡೆದಿದ್ದಾರೆ.

ಹೀಗಾಗಿ ನಾಳೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಾತ್ರವಲ್ಲದೆ ರೋಹಿತ್ ಶರ್ಮಾ ಕೂಡ ಶತಕದ ಸಾಧನೆ ಮಾಡುವ ಹೊಸ್ತಿಲಿನಲ್ಲಿದ್ದಾರೆ. ನಾಳಿನ ಪಂದ್ಯದಲ್ಲಿ ರೋಹಿತ್ ನಾಲ್ಕು ಕ್ಯಾಚ್‌ಗಳನ್ನು ಹಿಡಿದರೆ, ಅವರು ಏಕದಿನ ಪಂದ್ಯಗಳಲ್ಲಿ 100 ಕ್ಯಾಚ್‌ಗಳನ್ನು ಪೂರ್ಣಗೊಳಿಸುತ್ತಾರೆ.



















