AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಂಡೀಸ್ ವಿರುದ್ಧ ಸಿಕ್ಸರ್‌ಗಳ ಮಳೆ; ತನ್ನದೇ ದಾಖಲೆ ಮುರಿದ ವಿರಾಟ್ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಸಿಡಿಸಿ, ತಮ್ಮ ಏಕದಿನ ವೃತ್ತಿಜೀವನದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ (9) ದಾಖಲೆಯನ್ನು ಮುರಿದರು. ಟೆಸ್ಟ್ ಮತ್ತು ಟಿ20 ನಿವೃತ್ತಿಯ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್ ಮಾಡುತ್ತಿರುವ ಕೊಹ್ಲಿ, ಈ ಶತಕದೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15,000 ರನ್‌ಗಳ ಮೈಲಿಗಲ್ಲನ್ನು ತಲುಪಿದರು. ಅವರ ಹೊಸ ಆಟದ ಶೈಲಿ ಮತ್ತು ದಾಖಲೆಗಳ ಸೃಷ್ಟಿ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

ಪೃಥ್ವಿಶಂಕರ
|

Updated on: Sep 28, 2026 | 8:29 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಶತಕ ಬಾರಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ 88 ಎಸೆತಗಳನ್ನು ಎದುರಿಸಿದ ಕೊಹ್ಲಿ 10 ಬೌಂಡರಿ ಹಾಗೂ 9 ಸಿಕ್ಸರ್‌ಗಳ ಸಹಿತ ಅಜೇಯ 139 ರನ್ ಕಲೆಹಾಕಿದರು (PC-PTI).

1 / 5
ತಮ್ಮ ಇನ್ನಿಂಗ್ಸ್​ನಲ್ಲಿ 9 ಸಿಕ್ಸರ್‌ಗಳನ್ನು ಬಾರಿಸಿದ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ ಇನ್ನಿಂಗ್ಸ್​ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದ ತಮ್ಮ ಹಳೆಯ ದಾಖಲೆಯನ್ನು ತಾವೇ ಮುರಿದರು. ಮೂರು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸೃಷ್ಟಿಸಿದ್ದ ದಾಖಲೆಯನ್ನು ಮೀರಿಸುವ ಮೂಲಕ ಕೊಹ್ಲಿ ಕ್ರಿಕೆಟ್ ಜಗತ್ತನ್ನು ಮತ್ತೊಮ್ಮೆ ಅಚ್ಚರಿಗೊಳಿಸಿದರು(PC-PTI).

2 / 5
ನಿಖರವಾಗಿ ಮೂರು ವರ್ಷಗಳ ಹಿಂದೆ ಅಂದರೆ 2023 ರಲ್ಲಿ ಕೊಹ್ಲಿ, ಇದೇ ಮೈದಾನದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 8 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈಗ, ಅದೇ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 9 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ತಮ್ಮ ವೈಯಕ್ತಿಕ ದಾಖಲೆಯನ್ನು ಮತ್ತಷ್ಟು ಸುಧಾರಿಸಿಕೊಂಡಿದ್ದಾರೆ(PC-PTI).

3 / 5
ಟೆಸ್ಟ್ ಮತ್ತು ಟಿ20 ಕ್ರಿಕೆಟ್ ಸ್ವರೂಪಗಳಿಂದ ನಿವೃತ್ತರಾದ ನಂತರ ವಿರಾಟ್ ಕೊಹ್ಲಿ ತಮ್ಮ ಏಕದಿನ ಆಟದ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ, ಅವರು ಹೆಚ್ಚು ಆಕ್ರಮಣಕಾರಿಯಾಗಿ ಮತ್ತು ಬಿರುಸಿನಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಕೊಹ್ಲಿ ಬ್ಯಾಟ್​ನಿಂದ ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆ ಸರಾಗವಾಗಿ ಸುರಿಯುತ್ತಿದೆ(PC-PTI).

4 / 5
ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಗಮನಾರ್ಹ ಮೈಲಿಗಲ್ಲು ತಲುಪಿದರು. ಈ ಪಂದ್ಯದೊಂದಿಗೆ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ಸಾವಿರ ರನ್‌ಗಳನ್ನು ಪೂರೈಸಿದರು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us