AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕದ ಪಂದ್ಯದಲ್ಲಿ 78ನೇ ಏಕದಿನ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ

Virat Kohli's Historic Half-Centuryಕಾರ್ಡಿಫ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಸೋಫಿಯಾ ಗಾರ್ಡನ್ಸ್‌ನಲ್ಲಿ ತಮ್ಮ ಮೊದಲ ರನ್ ಮತ್ತು 78ನೇ ಅಂತರರಾಷ್ಟ್ರೀಯ ಅರ್ಧಶತಕವನ್ನು ಪೂರೈಸಿದರು. ಇಂಗ್ಲೆಂಡ್ ವಿರುದ್ಧ ಇದು ಅವರ 14ನೇ 50+ ಸ್ಕೋರ್ ಆಗಿದ್ದು, ವಿವ್ ರಿಚರ್ಡ್ಸ್ ದಾಖಲೆ ಸರಿಗಟ್ಟಿದರು. ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಜೊತೆಗೂಡಿ ಪ್ರಮುಖ ಜೊತೆಯಾಟ ಕಟ್ಟಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.:

TV9 Web
| Edited By: |

Updated on: Jul 16, 2026 | 8:04 PM

Share
ವಿರಾಟ್ ಕೊಹ್ಲಿ ಮೈದಾನಕ್ಕಿಳಿದಾಗಲೆಲ್ಲ ಒಂದಿಲ್ಲೊಂದು ದಾಖಲೆಗಳು ನಿರ್ಮಾಣಾವಾಗುತ್ತಿವೆ. ಅದರಂತೆ ಇಂದು ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಹಾಗೆಯೇ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ತನ್ನ ರನ್​ಗಳ ಖಾತೆಯನ್ನು ತೆರೆದರು (PC-PTI).

1 / 5
ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ಏಕೈಕ ಪಂದ್ಯವನ್ನಾಡಿದ್ದರು. ಆದರೆ ಆ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಆದರೀಗ ಈ ಮೈದಾನದಲ್ಲಿ ಕೊಹ್ಲಿ ಖಾತೆ ತೆರೆಯುವುದರ ಜೊತೆಗೆ ಅರ್ಧಶತಕದ ಇನ್ನಿಂಗ್ಸ್ ಕೂಡ ಪೂರೈಸಿದ್ದಾರೆ (PC-BCCI).

2 / 5
ಎಂದಿನಂತೆ ಶುಭ್​ಮನ್ ಗಿಲ್ ವಿಕೆಟ್ ಪತನದ ಬಳಿಕ ಕ್ರೀಸ್​ಗಿಳಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರೆ, ಇನ್ನೊಂದು ಅಚ್ಚರಿಯ ಸಂಗತಿಯಂತೆ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಅರ್ಧಶತಕವನ್ನು ಪೂರೈಸಿದರು. ಕೊಹ್ಲಿ 50 ಎಸೆತಗಳಲ್ಲಿ ತಮ್ಮ ಏಕದಿನ ವೃತ್ತಿಜೀವನದ 78 ನೇ ಅರ್ಧಶತಕವನ್ನು ಪೂರೈಸಿದರು(PC-BCCI).

3 / 5
ಇದು ಇಂಗ್ಲೆಂಡ್‌ ವಿರುದ್ಧ ವಿರಾಟ್ ಕೊಹ್ಲಿಯ 14ನೇ 50+ ರನ್​ಗಳ ಇನ್ನಿಂಗ್ಸ್ ಆಗಿದೆ. ಇದರಲ್ಲಿ 3 ಶತಕಗಳೂ ಸೇರಿವೆ. ಇದರೊಂದಿಗೆ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಅತಿ ಹೆಚ್ಚು 50+ ರನ್​ಗಳ ಇನ್ನಿಂಗ್ಸ್ ಆಡಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಎರಡನೇ ಸ್ಥಾನಕ್ಕೇರಿದ್ದಾರೆ. ಕೊಹ್ಲಿ ಜೊತೆಗೆ ವಿಂಡೀಸ್ ದಿಗ್ಗಜ ವಿವ್ ರಿಚರ್ಡ್ಸ್ ಕೂಡ ಎರಡನೇ ಸ್ಥಾನ ಪಡೆದಿದ್ದಾರೆ. ಕುಮಾರ ಸಂಗಕ್ಕಾರ ಅಗ್ರಸ್ಥಾನದಲ್ಲಿದ್ದಾರೆ(PC-BCCI).

4 / 5
ಈ ಅರ್ಧಶತಕದ ಇನ್ನಿಂಗ್ಸ್ ಜೊತೆಗೆ ಕೊಹ್ಲಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದರು. ಮೊದಲಿಗೆ ರೋಹಿತ್ ಜೊತೆಗೂಡಿ ಅರ್ಧಶತಕದ ಜೊತೆಯಾಟ ಕಟ್ಟಿದ ವಿರಾಟ್ ಕೊಹ್ಲಿ, ಉಪನಾಯಕ ಶ್ರೇಯಸ್ ಅಯ್ಯರ್​ ಅವರೊಂದಿಗೆ 4ನೇ ವಿಕೆಟ್​ಗೆ ಮತ್ತೊಂದು ಅರ್ಧಶತಕದ ಜೊತೆಯಾಟವನ್ನಾಡಿದ್ದಾರೆ. ಅಂತಿಮವಾಗಿ ಕೊಹ್ಲಿ 65 ರನ್ ಬಾರಿಸಿ ತಮ್ಮ ವಿಕೆಟ್ ಒಪ್ಪಿಸಿದರು(PC-BCCI).

5 / 5
Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಂದು ಶಾಕ್!

ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್

ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್

‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..

1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ

ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ

ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್

‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ