- Kannada News Photo gallery Cricket photos Virat Kohli only 7th player to have scored 2000+ runs in BGT
BGT ನಲ್ಲಿ ಹೊಸ ಮೈಲುಗಲ್ಲು ದಾಟಿದ ವಿರಾಟ್ ಕೊಹ್ಲಿ
India vs Australia Test: ಯಶಸ್ವಿ ಜೈಸ್ವಾಲ್ (161) ಅವರ ಶತಕ ಹಾಗೂ ಕೆಎಲ್ ರಾಹುಲ್ (77), ವಿರಾಟ್ ಕೊಹ್ಲಿ (55*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 120 ಓವರ್ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 388 ರನ್ ಕಲೆಹಾಕಿದೆ.
Updated on: Nov 24, 2024 | 1:53 PM

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಪರ್ತ್ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 52* ರನ್ ಬಾರಿಸಿದರು.

ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ ಭಾರತದ 5ನೇ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ಈ ಸಾಧನೆ ಮಾಡಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (3262), ರಿಕಿ ಪಾಂಟಿಂಗ್ (2555), ವಿವಿಎಸ್ ಲಕ್ಷ್ಮಣ್ (2434), ರಾಹುಲ್ ದ್ರಾವಿಡ್ (2143), ಮೈಕೆಲ್ ಕ್ಲಾರ್ಕ್ (2049) ಮತ್ತು ಚೇತೇಶ್ವರ ಪೂಜಾರ (2033) ಮಾತ್ರ ಈ ಸಾಧನೆ ಮಾಡಿದ್ದರು.

ಇದೀಗ 44 ಇನಿಂಗ್ಸ್ಗಳ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 2000* ರನ್ ಪೂರೈಸಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ಗಳ ಮೈಲುಗಲ್ಲು ದಾಟಿದ 7ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ 34 ಟೆಸ್ಟ್ ಪಂದ್ಯಗಳಲ್ಲಿ 65 ಇನಿಂಗ್ಸ್ ಆಡಿರುವ ಸಚಿನ್ ಒಟ್ಟು 3262 ರನ್ ಕಲೆಹಾಕಿದ್ದಾರೆ.

ಯಶಸ್ವಿ ಜೈಸ್ವಾಲ್ (161) ಅವರ ಶತಕ ಹಾಗೂ ಕೆಎಲ್ ರಾಹುಲ್ (77), ವಿರಾಟ್ ಕೊಹ್ಲಿ (55*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 120 ಓವರ್ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 388 ರನ್ ಕಲೆಹಾಕಿದೆ. ಸದ್ಯ ಕೊಹ್ಲಿ ಹಾಗೂ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಮಾಡುತ್ತಿದ್ದು, ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ ಒಟ್ಟು 434 ರನ್ಗಳಿಸಿದೆ.









