BGT ನಲ್ಲಿ ಹೊಸ ಮೈಲುಗಲ್ಲು ದಾಟಿದ ವಿರಾಟ್ ಕೊಹ್ಲಿ

|

Updated on: Nov 24, 2024 | 1:53 PM

India vs Australia Test: ಯಶಸ್ವಿ ಜೈಸ್ವಾಲ್ (161) ಅವರ ಶತಕ ಹಾಗೂ ಕೆಎಲ್ ರಾಹುಲ್ (77), ವಿರಾಟ್ ಕೊಹ್ಲಿ (55*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 120 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 388 ರನ್ ಕಲೆಹಾಕಿದೆ.

1 / 6
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಪರ್ತ್​ನ ಒಪ್ಟಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 52* ರನ್​ ಬಾರಿಸಿದರು.

2 / 6
ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್ ಪೂರೈಸಿದ ಭಾರತದ 5ನೇ ಬ್ಯಾಟರ್ ಎನಿಸಿಕೊಂಡರು. ಹಾಗೆಯೇ ಈ ಸಾಧನೆ ಮಾಡಿದ 7ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

3 / 6
ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ (3262), ರಿಕಿ ಪಾಂಟಿಂಗ್ (2555), ವಿವಿಎಸ್​ ಲಕ್ಷ್ಮಣ್ (2434), ರಾಹುಲ್ ದ್ರಾವಿಡ್ (2143), ಮೈಕೆಲ್ ಕ್ಲಾರ್ಕ್​ (2049) ಮತ್ತು ಚೇತೇಶ್ವರ ಪೂಜಾರ (2033) ಮಾತ್ರ ಈ ಸಾಧನೆ ಮಾಡಿದ್ದರು.

4 / 6
ಇದೀಗ 44 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 2000* ರನ್ ಪೂರೈಸಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಸಾವಿರ ರನ್​ಗಳ ಮೈಲುಗಲ್ಲು ದಾಟಿದ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ 34 ಟೆಸ್ಟ್ ಪಂದ್ಯಗಳಲ್ಲಿ 65 ಇನಿಂಗ್ಸ್​ ಆಡಿರುವ ಸಚಿನ್ ಒಟ್ಟು 3262	 ರನ್ ಕಲೆಹಾಕಿದ್ದಾರೆ.

6 / 6
ಯಶಸ್ವಿ ಜೈಸ್ವಾಲ್ (161) ಅವರ ಶತಕ ಹಾಗೂ ಕೆಎಲ್ ರಾಹುಲ್ (77), ವಿರಾಟ್ ಕೊಹ್ಲಿ (55*) ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 120 ಓವರ್​ಗಳ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 388 ರನ್ ಕಲೆಹಾಕಿದೆ. ಸದ್ಯ ಕೊಹ್ಲಿ ಹಾಗೂ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಮಾಡುತ್ತಿದ್ದು, ಮೊದಲ ಇನಿಂಗ್ಸ್​ ಮುನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 434 ರನ್​ಗಳಿಸಿದೆ.