AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17 ವರ್ಷಗಳ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಹಿಂದೆಂದೂ ಹೀಗೆ ಔಟಾಗಿರಲಿಲ್ಲ..!

Virat Kohli: ಅಡಿಲೇಡ್​ನ ಓವಲ್ ಮೈದಾನ ವಿರಾಟ್ ಕೊಹ್ಲಿಯ ನೆಚ್ಚಿನ ಕ್ರಿಕೆಟ್ ಗ್ರೌಂಡ್. ಈ ಪಿಚ್​ನಲ್ಲಿ 17 ಇನಿಂಗ್ಸ್ ಆಡಿದ್ದ ಕಿಂಗ್ ಕೊಹ್ಲಿ ಬರೋಬ್ಬರಿ 975 ರನ್​ ಬಾರಿಸಿದ್ದರು. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಒಂದೇ ಮೈದಾನದಲ್ಲಿ ಅತ್ಯಧಿಕ ರನ್ ಪೇರಿಸಿದ ವಿದೇಶಿ ದಾಂಡಿಗನೆಂಬ ದಾಖಲೆ ನಿರ್ಮಿಸಿದ್ದರು.

ಝಾಹಿರ್ ಯೂಸುಫ್
|

Updated on: Oct 23, 2025 | 11:23 AM

Share
ವಿರಾಟ್ ಕೊಹ್ಲಿ (Virat Kohli)  ಏಕದಿನ ವೃತ್ತಿ ಜೀವನ ಆರಂಭಿಸಿ 17 ವರ್ಷಗಳಾಗಿವೆ. ಈ ಹದಿನೇಳು ವರ್ಷಗಳಲ್ಲಿ ಒಮ್ಮೆಯೂ ಅವರು ಬ್ಯಾಕ್ ಟು ಬ್ಯಾಕ್ ಡಕ್​ ಔಟ್ ಆಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಕೊಹ್ಲಿಯನ್ನು ಸತತ ಶೂನ್ಯಕ್ಕೆ ಔಟ್ ಮಾಡುವಲ್ಲಿ ಆಸ್ಟ್ರೇಲಿಯಾ ವೇಗಿಗಳು ಯಶಸ್ವಿಯಾಗಿದ್ದಾರೆ.

1 / 5
ಅಡಿಲೇಡ್​ನ ಓವಲ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿಯನ್ನು ಎಲ್​ಬಿಡಬ್ಲ್ಯೂ ಮಾಡುವಲ್ಲಿ ಆಸೀಸ್ ವೇಗಿ ಕ್ಸೇವಿಯರ್ ಬಾರ್ಟ್ಲೆಟ್ ಯಶಸ್ವಿಯಾಗಿದ್ದಾರೆ.

2 / 5
ಇದಕ್ಕೂ ಮುನ್ನ ಪರ್ತ್​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಚೆಲ್ ಸ್ಟಾರ್ಕ್​​ಗೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದೀಗ ಮತ್ತೆ ಸೊನ್ನೆ ಸುತ್ತುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದಲ್ಲಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಡಕೌಟ್ ಆಗಿದ್ದಾರೆ.

3 / 5
ಅದರಲ್ಲೂ ತನ್ನ ನೆಚ್ಚಿನ ಮೈದಾನದಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಡಕೌಟ್ ಆಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಇದಕ್ಕೂ ಮುನ್ನ ಅಡಿಲೇಡ್ ಓವಲ್ ಮೈದಾನದಲ್ಲಿ ಆಡಿದ 17 ಇನಿಂಗ್ಸ್​ಗಳಲ್ಲಿ ವಿರಾಟ್ ಕೊಹ್ಲಿ ಒಟ್ಟು 5 ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ 975 ರನ್​ ಕಲೆಹಾಕಿದ್ದರು.

4 / 5
ಅಂದರೆ ಆಸ್ಟ್ರೇಲಿಯಾದ ಒಂದೇ ಪಿಚ್​ನಲ್ಲಿ ಅತ್ಯಧಿಕ ರನ್​ಗಳಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇದೀಗ ಭರ್ಜರಿ ದಾಖಲೆ ಬರೆದ ಮೈದಾನದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಕಿಂಗ್ ಕೊಹ್ಲಿ ಭಾರದ ಹೆಜ್ಜೆ ಹಾಕಿದ್ದಾರೆ.

5 / 5
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್

ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು

ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!

ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ

ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!

ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ