Updated on: Sep 26, 2022 | 6:08 PM
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ 48 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ನೊಂದಿಗೆ 63 ರನ್ ಬಾರಿಸಿ ಟೀಮ್ ಇಂಡಿಯಾ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮಹತ್ವದ ಪಾತ್ರವಹಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ವಿಶೇಷ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ 63 ರನ್ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡರು.
ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 24 ಸಾವಿರ ರನ್ ಪೂರೈಸಿದ ಭಾರತದ ಮೂರನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾದರು. ಹಾಗಿದ್ರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ (ಟೆಸ್ಟ್+ಏಕದಿನ+ಟಿ20) ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್ಮನ್ಗಳು ಯಾರೆಲ್ಲಾ ಎಂದು ನೋಡೋಣ....
1- ಸಚಿನ್ ತೆಂಡೂಲ್ಕರ್: ಭಾರತದ ಪರ 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 34357 ರನ್ ಕಲೆಹಾಕುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆಯನ್ನೂ ಕೂಡ ಸಚಿನ್ ಹೊಂದಿದ್ದಾರೆ.
2- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ಪರ 471 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 24078 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
3- ರಾಹುಲ್ ದ್ರಾವಿಡ್: ಟೀಮ್ ಇಂಡಿಯಾದ ಮಾಜಿ ನಾಯಕ, ಪ್ರಸ್ತುತ ಕೋಚ್ ರಾಹುಲ್ ದ್ರಾವಿಡ್ ಭಾರತದ ಪರ ಒಟ್ಟು 504 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 24064 ರನ್ ಕಲೆಹಾಕುವ ಮೂಲಕ ಅತ್ಯಧಿಕ ರನ್ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.
4- ಸೌರವ್ ಗಂಗೂಲಿ: ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಭಾರತದ ಪರ 421 ಪಂದ್ಯಗಳಿಂದ 18433 ರನ್ ಕಲೆಹಾಕಿದ್ದಾರೆ.
5- ಮಹೇಂದ್ರ ಸಿಂಗ್ ಧೋನಿ: ಟೀಮ್ ಇಂಡಿಯಾದ ಯಶಸ್ವಿ ನಾಯಕ ಧೋನಿ 535 ಪಂದ್ಯಗಳಿಂದ ಒಟ್ಟು 17092 ರನ್ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.