AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಏಷ್ಯಾಕಪ್​ಗೂ ಮುನ್ನ ಹೊರಬಿತ್ತು ಕಿಂಗ್ ಕೊಹ್ಲಿಯ ಯೋ-ಯೋ ಟೆಸ್ಟ್‌ ರಿಸಲ್ಟ್..!

Virat Kohli: ಇದೀಗ ಟೀಂ ಇಂಡಿಯಾದ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದು, ಈ ಟೆಸ್ಟ್‌ನಲ್ಲಿ ಕೊಹ್ಲಿ 17.2 ಅಂಕ ಸಂಪಾಧಿಸುವುದರೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಕೊಹ್ಲಿ ಅವರೇ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Aug 24, 2023 | 12:54 PM

ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್‌ ತಯಾರಿಗಾಗಿ ಟೀಂ ಇಂಡಿಯಾ ಆಟಗಾರರು ಬೆಂಗಳೂರಿನ ಎನ್​ಸಿಎನಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

1 / 8
ಈ ವೇಳೆ ಟೀಂ ಇಂಡಿಯಾ ಆಟಗಾರರ ಫಿಟ್ನೆಸ್ ಸಾಮಥ್ಯ್ರ ಪರೀಕ್ಷಿಸಲು ಎಲ್ಲಾ ಆಟಗಾರರನ್ನು ಯೋ-ಯೋ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಲ್ಲಿ ಪಾಸಾಗುವ ಆಟಗಾರರಿಗೆ ಏಷ್ಯಾಕಪ್‌ ಹಾಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದು ಖಚಿತ. ಪರೀಕ್ಷೆಯಲ್ಲಿ ಫೇಲ್ ಆದ ಆಟಗಾರರು ಬೆಂಚ್ ಕಾಯುವುದು ಅನಿವಾರ್ಯವಾಗಿದೆ.

2 / 8
ಇದೀಗ ಟೀಂ ಇಂಡಿಯಾದ ಸೂಪರ್‌ಸ್ಟಾರ್ ವಿರಾಟ್ ಕೊಹ್ಲಿ ಯೋ-ಯೋ ಟೆಸ್ಟ್‌ಗೆ ಒಳಗಾಗಿದ್ದು, ಈ ಟೆಸ್ಟ್‌ನಲ್ಲಿ ಕೊಹ್ಲಿ 17.2 ಅಂಕ ಸಂಪಾಧಿಸುವುದರೊಂದಿಗೆ ತೇರ್ಗಡೆಗೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ಕೊಹ್ಲಿ ಅವರೇ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 8
ಏಷ್ಯಾಕಪ್ ತಂಡದ ಭಾಗವಾಗಿರುವ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದ ಹಾಗೂ ದೀರ್ಘ ಸಮಯದಿಂದ ತಂಡದಿಂದ ಹೊರಗುಳಿದಿರುವ ಭಾರತೀಯ ಆಟಗಾರರು ಈ ಟೆಸ್ಟ್​ನಲ್ಲಿ ಭಾಗವಹಿಸುತ್ತಿದ್ದಾರೆ.

4 / 8
ವಾಸ್ತವವಾಗಿ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಏಕದಿನ  ಸರಣಿಯ ಒಂದು ಪಂದ್ಯದಲ್ಲಿ ಮಾತ್ರ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಕೊಹ್ಲಿ ತವರಿಗೆ ವಾಪಸ್ಸಾಗಿದ್ದರು. ಹೀಗಾಗಿ ಅಂದಿನಿಂದ ವಿಶ್ರಾಂತಿಯಲ್ಲಿದ ಕೊಹ್ಲಿ ಇದೀಗ ಯೋ ಯೋ ಟೆಸ್ಟ್​ಗೆ ಒಳಗಾಗಿದ್ದಾರೆ.

5 / 8
ಟೀಂ ಇಂಡಿಯಾದ ನಾಯಕರಾಗಿದ್ದ ವೇಳೆ ಸ್ವತಃ ಕೊಹ್ಲಿ ಅವರೇ ಭಾರತ ತಂಡದಲ್ಲಿ ಆಯ್ಕೆಯಾಗಲು ಯೋ-ಯೋ ಟೆಸ್ಟ್ ಕಡ್ಡಾಯಗೊಳಿಸಬೇಕೆಂದು ಪ್ರತಿಪಾದಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಈ ಟೆಸ್ಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಟಗಾರರ ಫಿಟ್‌ನೆಸ್ ಅನ್ನು ಅಳೆಯಲು ಈ ಟೆಸ್ಟ್ ಅನ್ನು ಮಾನದಂಡವಾಗಿ ಬಳಸಲಾಗುತ್ತಿದೆ.

6 / 8
ಯೋ-ಯೋ ಪರೀಕ್ಷೆಯಲ್ಲಿ ಒಟ್ಟು 23 ಹಂತಗಳಿವೆ. ಕ್ರಿಕೆಟಿಗರಿಗೆ ಇದು 5ನೇ ಹಂತದಿಂದ ಪ್ರಾರಂಭವಾಗುತ್ತದೆ. ಇದರ ಪ್ರಕಾರ ಪ್ರತಿಯೊಬ್ಬ ಆಟಗಾರನು ಮೊದಲು 20 ಮೀಟರ್‌ನಷ್ಟು ಅಂತರವನ್ನು ಕ್ರಮಿಸಿ, ಬಳಿಕ ಆರಂಭಿಸಿದ ಜಾಗಕ್ಕೆ ಮತ್ತೆ ವಾಪಸ್ ಬರಬೇಕು. ಅಂದರೆ ಒಟ್ಟು 40 ಮೀಟರ್ ದೂರವನ್ನು ನಿಗದಿತ ಸಮಯದೊಳಗೆ ಓಡಿ ಮುಗಿಸಿರಬೇಕು.

7 / 8
ಹಂತಗಳ ಸಂಖ್ಯೆ ಹೆಚ್ಚಾದಂತೆ, ಈ ದೂರವನ್ನು ಕ್ರಮಿಸುವ ಸಮಯವೂ ಕಡಿಮೆಯಾಗುತ್ತದೆ. ಇದರ ಆಧಾರದ ಮೇಲೆ, ಸ್ಕೋರ್ ಅನ್ನು ಸಂಪೂರ್ಣವಾಗಿ ಸಾಫ್ಟ್‌ವೇರ್‌ನಲ್ಲಿ ನಿರ್ಧರಿಸಲಾಗುತ್ತದೆ. ಯೋ-ಯೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕನಿಷ್ಠ ಪಕ್ಷ 16.1 ಅಂಕಗಳನ್ನು ಪಡೆಯಲೇಬೇಕು. ಇದಕ್ಕಿಂತ ಕಡಿಮೆ ಅಂಕವನ್ನು ಗಳಿಸಿದವರನ್ನು ಅನುತೀರ್ಣ ಎಂದು ನಿರ್ಧರಿಸಲಾಗುತ್ತದೆ.

8 / 8
Follow us
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ

ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!

ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ

2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?

ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ

ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ