- TV9 Kannada Photo gallery Cricket photos Virat Kohli Poor performance in international cricket in 2024
Virat Kohli: 2024 ರಲ್ಲಿ ಕಿಂಗ್ ಕೊಹ್ಲಿ ಕಂಗಾಲು..!
Virat Kohli: ವಿರಾಟ್ ಕೊಹ್ಲಿ ಈ ವರ್ಷ ಒಟ್ಟು 23 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು ಕಲೆಹಾಕಿರುವುದು ಕೇವಲ 655 ರನ್ಗಳು ಮಾತ್ರ. ಇದೇ ವೇಳೆ ಅವರ ಬ್ಯಾಟ್ನಿಂದ ಮೂಡಿಬಂದಿರುವುದು ಕೇವಲ ಒಂದು ಸೆಂಚುರಿ. ಅಂದರೆ 2024 ರಲ್ಲಿ ಕೊಹ್ಲಿ 21.83 ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ.
Updated on: Dec 31, 2024 | 3:03 PM

ವಿರಾಟ್ ಕೊಹ್ಲಿ ಪಾಲಿಗೆ 2024 ಸಿಹಿಯೊಂದಿಗೆ ಕಹಿ ತುಂಬಿದ ವರ್ಷ. ಏಕೆಂದರೆ ಈ ವರ್ಷ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಕಿಂಗ್ ಕೊಹ್ಲಿ ತಮ್ಮ ಬಹುಕಾಲದ ಕನಸನ್ನು ಈಡೇರಿಸಿಕೊಂಡಿದ್ದಾರೆ. ಆದರೆ ಇದೇ ವರ್ಷ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನೂ ಸಹ ನೀಡಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು...

ವಿರಾಟ್ ಕೊಹ್ಲಿ ಈ ವರ್ಷ ಒಟ್ಟು 23 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 32 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಆದರೆ ಕೊಹ್ಲಿಯ ಬ್ಯಾಟ್ನಿಂದ ಮೂಡಿಬಂದ ಶತಕಗಳ ಸಂಖ್ಯೆ ಕೇವಲ 1. ಇನ್ನು ಐವತ್ತರ ಗಡಿದಾಟಿದ್ದು ಕೇವಲ 2 ಬಾರಿ ಮಾತ್ರ ಎಂದರೆ ನಂಬಲೇಬೇಕು.

ಈ ವರ್ಷ 10 ಟೆಸ್ಟ್ ಪಂದ್ಯಗಳಲ್ಲಿ 19 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 673 ಎಸೆತಗಳಲ್ಲಿ 417 ರನ್ ಕಲೆಹಾಕಿದ್ದಾರೆ. ಅದು ಕೂಡ ಕೇವಲ 24.52 ರ ಸರಾಸರಿಯಲ್ಲಿ. ಈ ವೇಳೆ ಒಂದು ಶತಕ ಹಾಗೂ ಒಂದು ಅರ್ಧಶತಕವನ್ನು ಬಾರಿಸಲಷ್ಟೇ ಶಕ್ತರಾಗಿದ್ದಾರೆ.

2024ರಲ್ಲಿ ವಿರಾಟ್ ಕೊಹ್ಲಿ ಕೇವಲ 3 ಏಕದಿನ ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 58 ರನ್ಗಳು. ಅಂದರೆ 19.33 ರ ಅವರೇಜ್ನಲ್ಲಿ ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಈ ಮೂರು ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕವನ್ನೂ ಸಹ ಬಾರಿಸಿಲ್ಲ.

ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಈ ವರ್ಷ 10 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ಪಂದ್ಯಗಳಲ್ಲೂ ಅಟ್ಟರ್ ಫ್ಲಾಪ್ ಆಗಿದ್ದರು. ಆದರೆ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ 76 ರನ್ ಬಾರಿಸಿ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾಗ್ಯೂ ಈ ವರ್ಷ ಕೊಹ್ಲಿ 10 ಟಿ20 ಪಂದ್ಯಗಳಿಂದ 18ರ ಸರಾಸರಿಯಲ್ಲಿ 180 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಅಂದರೆ ಮೂರು ಮಾದರಿಯಲ್ಲೂ ವಿರಾಟ್ ಕೊಹ್ಲಿ ಕಡೆಯಿಂದ ಈ ವರ್ಷ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಕಳಪೆ ಪ್ರದರ್ಶನೊಂದಿಗೆ 2024 ಕ್ಕೆ ಗುಡ್ ಬೈ ಹೇಳಿರುವ ವಿರಾಟ್ ಕೊಹ್ಲಿ 2025 ರಲ್ಲಿ ವಿರಾಟ ರೂಪ ತೋರಿಸಲಿದ್ದಾರಾ ಕಾದು ನೋಡಬೇಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



