- Kannada News Photo gallery Cricket photos Virat Kohli Record fastest to score 25,000 runs in international cricket
Virat Kohli Records: 25 ಸಾವಿರ ರನ್ ಪೂರೈಸಲು ಯಾರ್ಯಾರು ಎಷ್ಟೆಷ್ಟು ಇನಿಂಗ್ಸ್ ಆಡಿದ್ದರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Virat Kohli Records: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
Updated on:Feb 19, 2023 | 7:54 PM

ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ 20 ರನ್ ಬಾರಿಸಿದ್ದರು. ಈ ಇಪ್ಪತ್ತು ರನ್ಗಳೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ 6ನೇ ಬ್ಯಾಟರ್ ಎಂಬ ವಿಶೇಷ ದಾಖಲೆ ಬರೆದರು.

ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಸಚಿನ್ ತೆಂಡೂಲ್ಕರ್ 577 ಇನಿಂಗ್ಸ್ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿದು ವಿರಾಟ್ ಕೊಹ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಲು ಯಾರ್ಯಾರು ಎಷ್ಟೆಷ್ಟು ಇನಿಂಗ್ಸ್ ಆಡಿದ್ದರು ಎಂಬುದರ ಕಂಪ್ಲೀಟ್ ಡಿಟೇಲ್ಸ್ ಈ ಕೆಳಗಿನಂತಿದೆ.

1- ವಿರಾಟ್ ಕೊಹ್ಲಿ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 549 ಇನಿಂಗ್ಸ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ್ದರು. ಇದರಲ್ಲಿ ಟೆಸ್ಟ್ ಕ್ರಿಕೆಟ್ನ 8195 ರನ್, ಏಕದಿನ ಕ್ರಿಕೆಟ್ನ 12809 ರನ್ ಹಾಗೂ ಟಿ20 ಕ್ರಿಕೆಟ್ನ 4008 ರನ್ಗಳು ಸೇರಿವೆ.

2- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಾಧನೆ ಮಾಡಲು ತೆಗೆದುಕೊಂಡಿರುವುದು ಬರೋಬ್ಬರಿ 577 ಇನಿಂಗ್ಸ್. ಈ ಮೂಲಕ 25 ಸಾವಿರ ರನ್ ಪೂರೈಸಿದ್ದರು.

3- ರಿಕಿ ಪಾಂಟಿಂಗ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ವೇಳೆ 588 ಇನಿಂಗ್ಸ್ ಮೂಲಕ 25 ಸಾವಿರ ರನ್ ಪೂರೈಸಿದ್ದರು.

4- ಜಾಕ್ಸ್ ಕಾಲಿಸ್: ಸೌತ್ ಆಫ್ರಿಕಾದ ಆಲ್ರೌಂಡರ್ ಜಾಕ್ಸ್ ಕಾಲಿಸ್ 594 ಇನಿಂಗ್ಸ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ್ದರು.

5- ಕುಮಾರ ಸಂಗಾಕ್ಕರ: ಶ್ರೀಲಂಕಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕುಮಾರ ಸಂಗಾಕ್ಕರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಲು 608 ಇನಿಂಗ್ಸ್ಗಳನ್ನು ಆಡಿದ್ದರು.

6- ಮಹೇಲ ಜಯವರ್ಧನೆ: ಶ್ರೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ 701 ಇನಿಂಗ್ಸ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25 ಸಾವಿರ ರನ್ ಪೂರೈಸಿದ್ದರು.

ಇದೀಗ ಇವರೆಲ್ಲರನ್ನೂ ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ 549 ಇನಿಂಗ್ಸ್ ಮೂಲಕ 25 ಸಾವಿರ ರನ್ ಪೂರೈಸಿ ವಿರಾಟ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Published On - 7:24 pm, Sun, 19 February 23




