Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆ ಉಡೀಸ್

| Updated By: ಝಾಹಿರ್ ಯೂಸುಫ್

Updated on: Oct 23, 2023 | 9:23 PM

Virat Kohli Records: ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಜಯದೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳ ಕೊಡುಗೆ ನೀಡಿದ್ದ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿದರು.

1 / 5
ಧರ್ಮಶಾಲಾದಲ್ಲಿ ನಡೆದ ಏಕದಿನ ವಿಶ್ವಕಪ್​ನ 21ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೊಹ್ಲಿ 104 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 95 ರನ್ ಬಾರಿಸಿದ್ದರು.

2 / 5
ಈ ಭರ್ಜರಿ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯೊಂದನ್ನು ಮುರಿದಿರುವುದು ವಿಶೇಷ.

3 / 5
ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಜಯದೊಂದಿಗೆ ಟೀಮ್ ಇಂಡಿಯಾ ಗೆಲುವಿನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳ ಕೊಡುಗೆ ನೀಡಿದ್ದ ಸಚಿನ್ ದಾಖಲೆಯನ್ನು ಕೊಹ್ಲಿ ಮುರಿದರು.

4 / 5
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತ ಗೆದ್ದ ಪಂದ್ಯಗಳಲ್ಲಿ 136 ಬಾರಿ 50+ ಸ್ಕೋರ್ ಬಾರಿಸಿ ಮಿಂಚಿದ್ದರು. ಇದೀಗ ಕಿಂಗ್ ಕೊಹ್ಲಿ ಈ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
ನ್ಯೂಝಿಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಭಾರತದ ಗೆಲುವಿನಲ್ಲಿ 137ನೇ ಬಾರಿಗೆ 50+ ರನ್​ಗಳ ಕೊಡುಗೆ ನೀಡಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.