ಪಾಂಟಿಂಗ್ ದಾಖಲೆ ಪುಡಿಪುಡಿ; ನ್ಯೂಜಿಲೆಂಡ್ ವಿರುದ್ಧ ಕೊಹ್ಲಿಯ ಹೊಸ ಮೈಲಿಗಲ್ಲು

Updated on: Nov 07, 2026 | 6:14 PM

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 7 ರನ್ ಗಳಿಸಿದ್ದರೂ, ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. ಕೇವಲ 38 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ 1,978 ರನ್ ಗಳಿಸಿ, ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. 2,000 ರನ್‌ಗಳ ಗಡಿ ತಲುಪುವ ಅವಕಾಶವೂ ಅವರಿಗಿದೆ.

1 / 5
ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಶನಿವಾರ ವೆಲ್ಲಿಂಗ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಅವರು ಕೇವಲ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಈ ಅಲ್ಪ ಮೊತ್ತದ ಇನ್ನಿಂಗ್ಸ್‌ನಲ್ಲೂ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದರು(PC-PTI).

ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಶನಿವಾರ ವೆಲ್ಲಿಂಗ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಅವರು ಕೇವಲ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಈ ಅಲ್ಪ ಮೊತ್ತದ ಇನ್ನಿಂಗ್ಸ್‌ನಲ್ಲೂ ಕೊಹ್ಲಿ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದರು(PC-PTI).

2 / 5

ಈ ಪಂದ್ಯದಲ್ಲಿ 7 ರನ್​​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಹೆಸರಿನಲ್ಲಿದ್ದ ಮಹತ್ವದ ದಾಖಲೆಯನ್ನು ಹಿಂದಿಕ್ಕಿ ಹೊಸ ಸಾಧನೆ ಮಾಡಿದ್ದಾರೆ. ಪಾಂಟಿಂಗ್ ಅವರ ದಾಖಲೆಯನ್ನು ಮುರಿಯಲು ಕೊಹ್ಲಿಗೆ ಕೇವಲ ಒಂದು ರನ್ ಅಗತ್ಯವಿತ್ತು. ಎರಡನೇ ಎಸೆತದಲ್ಲೇ ಬೌಂಡರಿ ಬಾರಿಸಿದ ಕೊಹ್ಲಿ, ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು(PC-PTI).

3 / 5

ರಿಕಿ ಪಾಂಟಿಂಗ್ ನ್ಯೂಜಿಲೆಂಡ್ ವಿರುದ್ಧ 51 ಏಕದಿನ ಪಂದ್ಯಗಳ 51 ಇನ್ನಿಂಗ್ಸ್‌ಗಳಲ್ಲಿ 45.83ರ ಸರಾಸರಿಯಲ್ಲಿ 1,971 ರನ್ ಗಳಿಸಿದ್ದರು. ಇದರಲ್ಲಿ 12 ಅರ್ಧಶತಕ ಮತ್ತು ಆರು ಶತಕಗಳು ಸೇರಿದ್ದವು. ಆದರೆ ಕೊಹ್ಲಿ ಈ ದಾಖಲೆಯನ್ನು ಮುರಿಯಲು ತೆಗೆದುಕೊಂಡಿದ್ದು ಕೇವಲ 38 ಇನ್ನಿಂಗ್ಸ್‌ಗಳು ಮಾತ್ರ(PC-PTI).

4 / 5

ಇದೀಗ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಒಟ್ಟು 1,978 ರನ್ ಗಳಿಸಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಇನ್ನೂ 22 ರನ್ ಗಳಿಸಿದರೆ ಈ ಎದುರಾಳಿ ತಂಡದ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 2,000 ರನ್‌ಗಳ ಗಡಿ ದಾಟಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಎಂಬ ಇತಿಹಾಸ ನಿರ್ಮಿಸುವ ಅವಕಾಶವೂ ಅವರ ಮುಂದಿದೆ(PC-PTI).

5 / 5

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್134 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಭಾರತದ ಪರ ಯುವ ವೇಗಿ ಗುರ್ನೂರ್ ಬ್ರಾರ್ ನಾಲ್ಕು ವಿಕೆಟ್ ಕಬಳಿಸಿ ಮಿಂಚಿದರು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದಡಿಯಲ್ಲಿ 4 ರನ್​ಗಳಿಂದ ಗೆಲುವು ಸಾಧಿಸಿತು(PC-PTI).

Published On - 6:12 pm, Sat, 7 November 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us