ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೇಸಿಂಗ್ನಲ್ಲಿ 8000 ರನ್ ಕಲೆಹಾಕುವ ಮೂಲಕ ಎಂಬುದು ವಿಶೇಷ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 98 ಎಸೆತಗಳಲ್ಲಿ 84 ರನ್ ಬಾರಿಸಿದ್ದರು.
ಈ ಆಕರ್ಷಕ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್ನಲ್ಲಿ ಚೇಸಿಂಗ್ನಲ್ಲಿ 8000 ರನ್ ಪೂರೈಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ್ದರು.
ಏಕದಿನ ಪಂದ್ಯದಲ್ಲಿ ಚೇಸಿಂಗ್ ವೇಳೆ 232 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 8720 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಆದರೀಗ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಅಂದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 60+ ಅವರೇಜ್ನೊಂದಿಗೆ 8000+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಪಾತ್ರರಾಗಿದ್ದಾರೆ. ಸಚಿನ್ ತೆಂಡೂಲ್ಕರ್ 8720 ರನ್ ಬಾರಿಸಿದರೂ ಅವರು ಕಲೆಹಾಕಿದ್ದು 43.22ರ ಸರಾಸರಿಯಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.
ಇದೀಗ ಕೇವಲ 159 ಇನಿಂಗ್ಸ್ಗಳಲ್ಲಿ ವಿರಾಟ್ ಕೊಹ್ಲಿ 64.50ರ ಸರಾಸರಿಯಲ್ಲಿ ಒಟ್ಟು 8063 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಚೇಸಿಂಗ್ನಲ್ಲಿ 60 ಕ್ಕಿಂತ ಅಧಿಕ ಸರಾಸರಿಯಲ್ಲಿ 8 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ನಿರ್ಮಿಸಿದ್ದಾರೆ.
Published On - 6:30 am, Wed, 5 March 25