Virat Kohli: 12 ಎಸೆತ ಎದುರಿಸಿದರೆ ಕಿಂಗ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆ

Edited By:

Updated on: Jan 16, 2024 | 6:29 AM

Virat Kohli Records: ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.

1 / 6
ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

ಅಫ್ಘಾನಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್​ಗೆ ರಿ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ರಿ ಎಂಟ್ರಿ ಪಂದ್ಯದಲ್ಲಿ 16 ಎಸೆತಗಳನ್ನು ಎದುರಿಸಿದ ವಿರಾಟ್ 5 ಫೋರ್​ಗಳೊಂದಿಗೆ 29 ರನ್ ಬಾರಿಸಿ ಮಿಂಚಿದ್ದರು.

2 / 6

ಈ 29 ರನ್​ಗಳೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಚೇಸಿಂಗ್​ ವೇಳೆ 2 ಸಾವಿರ ರನ್ ಪೂರೈಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದರು. ಇದೀಗ ಕಿಂಗ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ. ಅದು ಬಾಲ್​ಗಳನ್ನು ಎದುರಿಸಿ ಬರೆಯುವ ವಿಶೇಷ ದಾಖಲೆಯ ಸನಿಹದಲ್ಲಿ ಎಂಬುದು ವಿಶೇಷ.

3 / 6

ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 12 ಎಸೆತಗಳನ್ನು ಎದುರಿಸಿದರೆ, ಟಿ20 ಕ್ರಿಕೆಟ್​ನಲ್ಲಿ 9 ಸಾವಿರ ಎಸೆತಗಳನ್ನು ಎದುರಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

4 / 6

ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನದ ಶೊಯೇಬ್ ಮಲಿಕ್ (10168 ಎಸೆತಗಳು) ಹಾಗೂ ಕ್ರಿಸ್ ಗೇಲ್ (10060 ಎಸೆತಗಳು) ಮಾತ್ರ ಈ ಸಾಧನೆ ಮಾಡಿದ್ದಾರೆ.

5 / 6

ಇದೀಗ 8972 ಎಸೆತಗಳನ್ನು ಎದುರಿಸಿರುವ ವಿರಾಟ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ಜನವರಿ 17 ರಂದು ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ಸಿರೀಸ್ ಅನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

Published On - 6:27 am, Tue, 16 January 24

Loading...
Unable to load recommendations.
Follow Us