Virat Kohli: ಸಚಿನ್ ಹೆಸರಿನಲ್ಲಿದ್ದ ಮತ್ತೊಂದು ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ
Virat Kohli Records: ರೋಹಿತ್ ಶರ್ಮಾ 39 ರನ್ ಬಾರಿಸಿದರೆ, ಶುಭ್ಮನ್ ಗಿಲ್ 36 ರನ್ಗಳಿಸಿದರು. ಇನ್ನು ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 46 ರನ್ ಬಾರಿಸಿ ಟೀಮ್ ಇಂಡಿಯಾ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ವಿಶೇಷ ದಾಖಲೆ ಕೂಡ ಸೇರ್ಪಡೆಯಾಗಿದೆ.
Updated on: Jan 04, 2024 | 7:28 AM

ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ ನಡುವಣ 2ನೇ ಟೆಸ್ಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಕೇವಲ 55 ರನ್ಗಳಿಗೆ ಆಲೌಟ್ ಆಗಿತ್ತು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಟೀಮ್ ಇಂಡಿಯಾ 153 ರನ್ಗಳಿಸಿ ಸರ್ವಪತನ ಕಂಡಿದೆ. ವಿಶೇಷ ಎಂದರೆ ಭಾರತ ತಂಡದ ಇನಿಂಗ್ಸ್ನಲ್ಲಿ ಎರಡಂಕಿಗಳಿಸಿದ್ದು ಕೇವಲ ಮೂವರು ಬ್ಯಾಟರ್ಗಳು ಮಾತ್ರ.

ರೋಹಿತ್ ಶರ್ಮಾ 39 ರನ್ ಬಾರಿಸಿದರೆ, ಶುಭ್ಮನ್ ಗಿಲ್ 36 ರನ್ಗಳಿಸಿದರು. ಇನ್ನು ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 5 ಫೋರ್ಗಳೊಂದಿಗೆ 46 ರನ್ ಬಾರಿಸಿ ಟೀಮ್ ಇಂಡಿಯಾ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇದರೊಂದಿಗೆ ಕಿಂಗ್ ಕೊಹ್ಲಿ ಹೆಸರಿಗೆ ವಿಶೇಷ ದಾಖಲೆ ಕೂಡ ಸೇರ್ಪಡೆಯಾಗಿದೆ.

ಅಂದರೆ 200 ಕ್ಕಿಂತ ಕಡಿಮೆ ಮೊತ್ತಕ್ಕೆ ಟೀಮ್ ಇಂಡಿಯಾ ಆಲೌಟ್ ಆದಾಗ ತಂಡದ ಪರ ಅತ್ಯಧಿಕ ಬಾರಿ ಗರಿಷ್ಠ ಸ್ಕೋರರ್ ಎನಿಸಿಕೊಂಡ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇದೀಗ 2ನೇ ಸ್ಥಾನಕ್ಕೇರಿದ್ದಾರೆ. ಅದು ಕೂಡ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಈ ಪಟ್ಟಿಯಲ್ಲಿ ಭಾರತದ ಲೆಜೆಂಡ್ ಸುನಿಲ್ ಗವಾಸ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ಇನಿಂಗ್ಸ್ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದಾಗ ಗವಾಸ್ಕರ್ ಒಟ್ಟು 10 ಬಾರಿ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ದ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿರುವ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ್ದಾರೆ. ಇದರೊಂದಿಗೆ ಅತ್ಯಲ್ಪ ಮೊತ್ತದಲ್ಲಿ ಕಿಂಗ್ ಕೊಹ್ಲಿ 9ನೇ ಬಾರಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕೂಡ ಟೀಮ್ ಇಂಡಿಯಾ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದಾಗ 9 ಬಾರಿ ಗರಿಷ್ಠ ಸ್ಕೋರರ್ ಆಗಿ ಹೊರಹೊಮ್ಮಿದ್ದರು. ಇದೀಗ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿರುವುದು ವಿಶೇಷ.



















