Virat Kohli: ಅತ್ಯಂತ ಕಳಪೆ ದಾಖಲೆ ಬರೆದ ಕಿಂಗ್ ಕೊಹ್ಲಿ
TV9 Web | Updated By: ಝಾಹಿರ್ ಯೂಸುಫ್
Updated on:
Jan 18, 2024 | 6:54 AM
Virat Kohli Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಖ್ಯಾತಿ ಫರೀದ್ ಪಾಲಾಯಿತು. ಇತ್ತ ಗೋಲ್ಡನ್ ಡಕ್ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.
1 / 6
ಬೆಂಗೂರಿನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಶೂನ್ಯಕ್ಕೆ ಔಟಾಗಿದ್ದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಎಡಗೈ ವೇಗಿ ಫರೀದ್ ಅಹ್ಮದ್ ಯಶಸ್ವಿಯಾದರು.
2 / 6
ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡಿದ ಖ್ಯಾತಿ ಫರೀದ್ ಪಾಲಾಯಿತು. ಇತ್ತ ಗೋಲ್ಡನ್ ಡಕ್ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.
3 / 6
ಅಂದರೆ ಭಾರತದ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.
4 / 6
ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಬಾರಿ ಡಕ್ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.
5 / 6
ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
6 / 6
ಒಟ್ಟಿನಲ್ಲಿ ಆರ್ಸಿಬಿ ತಂಡದ ತವರು ಮೈದಾನದಲ್ಲಿ ವಿರಾಟ್ ಕೊಹ್ಲಿ ಕಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಕಿಂಗ್ ಕೊಹ್ಲಿ ಅತ್ಯಂತ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿರುವುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ.