ಇನ್ನು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, “ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್ ಪ್ರವಾಸದ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದರು. ಆ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಬಿಸಿಸಿಐ ಕೊಹ್ಲಿಗೆ ಮನವಿ ಮಾಡಿತ್ತು. ಆದರೆ, ಕೊಹ್ಲಿ ಇದಕ್ಕೆ ಕಿವಿಗೊಡದೆ ಟಿ20 ಟೀಮ್ನ ನಾಯಕತ್ವ ಬಿಟ್ಟು ಕೆಳಗಿಳಿಯುವ ನಿರ್ಧಾರ ಘೋಷಿಸಿದರು ಎಂದು ಹೇಳಿದ್ದಾರೆ.