- Kannada News Photo gallery Cricket photos Virat Kohli Hints at Retirement? Australia Tour Uncertainty After Champions Trophy
‘ನಾನು ಮತ್ತೆ ಆಡದೇ ಇರಬಹುದು’; ಐಪಿಎಲ್ ಆರಂಭಕ್ಕೂ ಮುನ್ನ ಆಘಾತಕಾರಿ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ
Virat Kohli's Shocking Revelation: ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರವೂ, ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ. ವಿರಾಟ್ ಕೊಹ್ಲಿ ಅವರು ಮುಂದಿನ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡದಿರಬಹುದು ಎಂದು ಹೇಳಿದ್ದಾರೆ. ಇದು ಅವರ ನಿವೃತ್ತಿಯ ಸುಳಿವು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಅಭಿಮಾನಿಗಳು ಕೊಹ್ಲಿ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಲಿ ಎಂದು ಆಶಿಸುತ್ತಿದ್ದಾರೆ.
Updated on:Mar 15, 2025 | 8:08 PM

ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರವೂ, ಟೀಂ ಇಂಡಿಯಾದ ಕೆಲವು ಹಿರಿಯ ಆಟಗಾರರ ಭವಿಷ್ಯದ ಬಗ್ಗೆ ಪ್ರಶ್ನೆಗಳು ಹಾಗೇ ಉಳಿದಿವೆ. ನಾಯಕ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಸಧ್ಯಕ್ಕೆ ನಿವೃತ್ತಿ ಘೋಷಿಸುತ್ತಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.

ಇದೀಗ ಐಪಿಎಲ್ 2025 ರ ಸೀಸನ್ ಆರಂಭಕ್ಕೂ ಮುನ್ನ ಮಾತನಾಡಿರುವ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಆರ್ಸಿಬಿಯ ಕಾರ್ಯಕ್ರಮವೊಂದರಲ್ಲಿ ಮಾನಾಡಿರುವ ಕೊಹ್ಲಿ ನಾನು ಮತ್ತೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡದಿರಬಹುದು ಎಂದು ಹೇಳಿದ್ದಾರೆ.

ಐಪಿಎಲ್ ಆರಂಭಕ್ಕೆ ವಾರ ಸಮಯ ಉಳಿದಿರುವಾಗ ಆರ್ಸಿಬಿ ಪಡೆಯನ್ನು ಸೇರಿಕೊಂಡಿರುವ ವಿರಾಟ್ ಕೊಹ್ಲಿ, ಫ್ರಾಂಚೈಸಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದೇ ವೇಳೆ ಕೊಹ್ಲಿಯ ಇತ್ತೀಚಿನ ಫಾರ್ಮ್ ಬಗ್ಗೆ ಒಂದು ಪ್ರಶ್ನೆಯನ್ನು ಕೇಳಲಾಯಿತು.

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಇನ್ನೂರಕ್ಕೂ ಹೆಚ್ಚು ರನ್ ಗಳಿಸಿದ್ದ ವಿರಾಟ್, ಅದಕ್ಕೂ ಮೊದಲು ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದರು. 5 ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 1 ಶತಕವನ್ನು ಸಿಡಿಸಿದ್ದು ಬಿಟ್ಟರೆ, ಅವರ ಪ್ರದರ್ಶನ ತೀರ ಸಪ್ಪೆಯಾಗಿತ್ತು.

ಈ ಪ್ರವಾಸದುದ್ದಕ್ಕೂ, ಕೊಹ್ಲಿ ಆಫ್ ಸ್ಟಂಪ್‌ನ ಹೊರಗೆ ಹೋಗುವ ಎಸೆತಗಳನ್ನು ಆಡಲು ಯತ್ನಿಸಿ ಪದೇ ಪದೇ ವಿಕೆಟ್ ಕೈಚೆಲಿದರು ಇದು ಅಭಿಮಾನಿಗಳನ್ನು ಮಾತ್ರವಲ್ಲದೆ ತಜ್ಞರನ್ನೂ ಆಶ್ಚರ್ಯಗೊಳಿಸಿತು. ಇದೀಗ ಈ ಕಾರ್ಯಕ್ರಮದಲ್ಲಿ ಆ ಬಗ್ಗೆ ಕೊಹ್ಲಿ ಬಳಿ ಪ್ರಶ್ನೆ ಕೇಳಲಾಯಿತು.

ಇದಕ್ಕೆ ಅಚ್ಚರಿಯ ಉತ್ತರ ನೀಡಿದ ವಿರಾಟ್ ಕೊಹ್ಲಿ, ‘ನಾನು ಮತ್ತೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡದಿರಬಹುದು, ಆದ್ದರಿಂದ ಹಿಂದೆ ಏನೇ ನಡೆದರೂ ಅದರಲ್ಲಿ ನನಗೆ ತೃಪ್ತಿ ಇದೆ’ ಎಂದು ಹೇಳಿದ್ದಾರೆ. ಇದರರ್ಥ ಕೊಹ್ಲಿ ಮತ್ತೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡುವ ಸಾಧ್ಯತೆಗಳಿಲ್ಲ ಎಂದೇ ಹೇಳಬಹುದು. ಇದಕ್ಕೆ ಪೂರಕವಾಗಿ, ಭಾರತ 2027 ರ ಕೊನೆಯಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ.

ಕೊಹ್ಲಿ ಇದೀಗ ಈ ಹೇಳಿಕೆ ನೀಡಿರುವುದನ್ನು ಗಮನಿಸಿದರೆ, ಕೊಹ್ಲಿ 2027 ರ ಅತ್ಯಂಕ್ಕೂ ಮುನ್ನ ಕ್ರಿಕೆಟ್ಗೆ ವಿದಾಯ ಹೇಳಬಹುದು ಎಂಬ ಚರ್ಚೆ ಶುರುವಾಗಿದೆ. ಆದಾಗ್ಯೂ, ಅಭಿಮಾನಿಗಳು ಕೊಹ್ಲಿ ಮತ್ತೊಮ್ಮೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಲಿ. ಹಾಗೆಯೇ ಮುಂಬರುವ ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಬ್ಯಾಟ್‌ನಿಂದ ರನ್‌ಗಳ ಮಳೆ ಹರಿಯಲಿ ಎಂದು ಆಶಿಸುತ್ತಿದ್ದಾರೆ.
Published On - 8:05 pm, Sat, 15 March 25



















