AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Retirement: ಟೆಸ್ಟ್​ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

Virat Kohli Retirement: ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದು ಭಾರತ ಕ್ರಿಕೆಟ್‌ಗೆ ದೊಡ್ಡ ಆಘಾತವಾಗಿದೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ನಿರ್ಧಾರ ಭಾರತ ತಂಡದ ಮೇಲೆ ದುಷ್ಪರಿಣಾಮ ಬೀರಬಹುದು. ಆದಾಗ್ಯೂ ಟೆಸ್ಟ್ ಆಡದ ಕೊಹ್ಲಿಗೆ ಬಿಸಿಸಿಐನಿಂದ ಸಿಗುತ್ತಿದ್ದ ಪಂದ್ಯ ಶುಲ್ಕ ಪ್ರಮಾಣ ಕಡಿಮೆಯಾಗಲಿದೆ.

ಪೃಥ್ವಿಶಂಕರ
|

Updated on: May 12, 2025 | 6:39 PM

ಮುಂದಿನ ತಿಂಗಳು ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದೆ. ಈ ಪ್ರವಾಸದಲ್ಲಿ ಭಾರತ ಬರೋಬ್ಬರಿ 5 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಆದರೆ ಅದಕ್ಕೂ ಮುನ್ನ ಭಾರತ ಕ್ರಿಕೆಟ್​ಗೆ ದೊಡ್ಡ ಆಘಾತ ಎದುರಾಗುದೆ. ನಾಯಕ ರೋಹಿತ್ ಶರ್ಮಾ ನಂತರ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

1 / 8
ಇತ್ತೀಚೆಗೆ, ವಿರಾಟ್ ಟೆಸ್ಟ್ ಸ್ವರೂಪವನ್ನು ತೊರೆಯುವ ಬಗ್ಗೆ ಬಿಸಿಸಿಐಗೆ ಮಾಹಿತಿ ನೀಡಿದ್ದರು. ಆ ಬಳಿಕ ಕ್ರಿಕೆಟ್ ಮಂಡಳಿ ಅವರನ್ನು ಮನವೊಲಿಸಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿ ಹೊರಬಿದ್ದಿತ್ತು. ಆದರೆ ವಿರಾಟ್ ಇದ್ದಕ್ಕಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 14 ವರ್ಷಗಳ ಸುದೀರ್ಘ ಟೆಸ್ಟ್ ವೃತ್ತಿಜೀವನಕ್ಕೆ ಅಂತ್ಯ ಹಾಡಿದರು. ಈ ನಿರ್ಧಾರದಿಂದಾಗಿ ಪ್ರಸಕ್ತ ವರ್ಷದಲ್ಲಿ ಕೊಹ್ಲಿ ಕೋಟಿ ರೂ. ನಷ್ಟವುಂಟಾಗಿದೆ.

2 / 8
ವಿರಾಟ್ ಕೊಹ್ಲಿ ಈ ವರ್ಷದ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ಆಸ್ಟ್ರೇಲಿಯಾ ಪ್ರವಾಸ ವಿರಾಟ್‌ಗೆ ತುಂಬಾ ಕೆಟ್ಟದಾಗಿತ್ತು. ಆಡಿದ ಐದು ಪಂದ್ಯಗಳ ಸರಣಿಯಲ್ಲಿ ಅವರು ಕೇವಲ ಒಂದು ಶತಕ ಮಾತ್ರ ಬಾರಿಸಿದ್ದರು. ಅಂದಿನಿಂದ ಅವರ ಟೆಸ್ಟ್ ವೃತ್ತಿಜೀವನವು ಪ್ರಶ್ನಾರ್ಹವಾಗಿತ್ತು.

3 / 8
ಅಂತಿಮವಾಗಿ ಟೆಸ್ಟ್ ಮಾದರಿಗೆ ವಿದಾಯ ಹೇಳುವ ನಿರ್ಧಾರಕ್ಕೆ ಕೊಹ್ಲಿ ಬಂದಿದ್ದಾರೆ. ಈ ವರ್ಷ ಟೀಂ ಇಂಡಿಯಾ ಒಟ್ಟು 9 ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ. ಬಿಸಿಸಿಐ ತನ್ನ ಆಟಗಾರರಿಗೆ ಒಂದು ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ. ಪಂದ್ಯ ಶುಲ್ಕವನ್ನು ನೀಡುತ್ತದೆ. ವಿರಾಟ್ ಈ ವರ್ಷ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದದಿದ್ದರೆ, ಪ್ರಸಕ್ತ ವರ್ಷದಲ್ಲಿ ಟೆಸ್ಟ್ ಸ್ವರೂಪದಿಂದ 1 ಕೋಟಿ 35 ಲಕ್ಷ ರೂ. ಗಳಿಸಬಹುದಿತ್ತು.

4 / 8
ಟೀಂ ಇಂಡಿಯಾ ಮೊದಲು ಇಂಗ್ಲೆಂಡ್ ಪ್ರವಾಸ ಮಾಡಲಿದ್ದು, ಈ ಪ್ರವಾಸವು ಜೂನ್ 20 ರಿಂದ ಪ್ರಾರಂಭವಾಗಿ ಆಗಸ್ಟ್ 4 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ, ಎರಡೂ ತಂಡಗಳ ನಡುವೆ ಒಟ್ಟು 5 ಟೆಸ್ಟ್ ಪಂದ್ಯಗಳು ನಡೆಯಲಿವೆ.

5 / 8
ಇದಾದ ನಂತರ, ಟೀಂ ಇಂಡಿಯಾ ಅಕ್ಟೋಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ ನವೆಂಬರ್‌ನಲ್ಲಿ, ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯನ್ನು ಭಾರತದಲ್ಲೂ ಆಡಲಾಗುವುದು.

6 / 8
ವಿರಾಟ್ ಕೊಹ್ಲಿಯವರ 14 ವರ್ಷಗಳ ಟೆಸ್ಟ್ ವೃತ್ತಿಜೀವನ ಭಾರತೀಯ ಕ್ರಿಕೆಟ್‌ನಲ್ಲಿ ಸದಾ ಸ್ಮರಣೀಯವಾಗಿರುತ್ತದೆ. ಆಟಗಾರನಾಗಿ ಮಾತ್ರವಲ್ಲದೆ, ನಾಯಕನಾಗಿಯೂ ಅವರು ತಂಡವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ. ಟೀಂ ಇಂಡಿಯಾ ಪರ ಒಟ್ಟು 123 ಟೆಸ್ಟ್ ಪಂದ್ಯಗಳನ್ನು ಆಡಿರುವ ಕೊಹ್ಲಿ, 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ.

7 / 8
ಈ ಅವಧಿಯಲ್ಲಿ ವಿರಾಟ್ 31 ಅರ್ಧಶತಕ ಮತ್ತು 30 ಶತಕಗಳನ್ನು ಬಾರಿಸಿದ್ದಾರೆ. ಇದಲ್ಲದೆ, ಕೊಹ್ಲಿ 68 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದು, 40 ಪಂದ್ಯಗಳಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಅವರ ನಾಯಕತ್ವದಲ್ಲಿ ಭಾರತ ತಂಡ ಕೇವಲ 17 ಟೆಸ್ಟ್ ಪಂದ್ಯಗಳನ್ನು ಸೋತಿದ್ದರೆ, 11 ಪಂದ್ಯಗಳು ಡ್ರಾಗೊಂಡವು.

8 / 8
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!

ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್

ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ

ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?

ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ