IND vs ENG: ಏಕದಿನ ಸರಣಿಯಲ್ಲಿ 7 ದಾಖಲೆಗಳ ಮೇಲೆ ಕಣ್ಣಿಟ್ಟ ಕಿಂಗ್ ಕೊಹ್ಲಿ

Updated on: Jul 13, 2026 | 9:19 PM

Virat Kohli's ODI Comeback: ಗಾಯದಿಂದ ಚೇತರಿಸಿಕೊಂಡಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ 15,000 ಏಕದಿನ ರನ್‌ಗಳನ್ನು ಪೂರೈಸುವ, ಇಂಗ್ಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸುವ ಮತ್ತು ಇನ್ನೂ ಹಲವು ದಾಖಲೆಗಳನ್ನು ಮುರಿಯುವ ಗುರಿ ಹೊಂದಿದ್ದಾರೆ. ಸಚಿನ್ ತೆಂಡೂಲ್ಕರ್ ನಂತರ ಏಕದಿನದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ಅವರದು.

1 / 7
ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವ ಕೊಹ್ಲಿ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.ಆದಾಗ್ಯೂ ಗಾಯದ ಕಾರಣದಿಂದಾಗಿ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಆಡಿರಲಿಲ್ಲ(PC-PTI).

2 / 7
ವಾಸ್ತವವಾಗಿ ಐಪಿಎಲ್ 2026 ರ ಫೈನಲ್ ಪಂದ್ಯದ ವೇಳೆ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದರು. ಅಂದಿನಿಂದ ಕೊಹ್ಲಿ ಕ್ರಿಕೆಟ್​ನಿಂದ ದೂರ ಉಳಿದು ಚೇತರಿಕೆಯ ಹಾದಿಯಲ್ಲಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಅಬ್ಬರಿಸಿ ಒಂದಲ್ಲ, ಎರಡಲ್ಲ ಬರೋಬ್ಬರಿ ಏಳು ದಾಖಲೆಗಳನ್ನು ಮುರಿಯುವ ಇರಾದೆಯಲ್ಲಿದ್ದಾರೆ(PC-PTI).

3 / 7
ಇಂಗ್ಲೆಂಡ್‌ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ 203 ರನ್ ಗಳಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ 15,000 ರನ್‌ಗಳನ್ನು ಪೂರೈಸಲಿದ್ದಾರೆ. ಪ್ರಸ್ತುತ ಏಕದಿನದಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ(PC-PTI).

4 / 7
ಹಾಗೆಯೇ ವಿರಾಟ್ ಕೊಹ್ಲಿ ಈ ಸರಣಿಯ ಮೊದಲ ಪಂದ್ಯದಲ್ಲಿ ಒಂಬತ್ತು ರನ್ ಗಳಿಸಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ದಾಖಲೆ ಬರೆಯಲಿದ್ದಾರೆ. ಇಂಗ್ಲೆಂಡ್‌ ವಿರುದ್ಧ ಇದುವರೆಗೆ 38 ಏಕದಿನ ಪಂದ್ಯಗಳನ್ನಾಡಿರುವ ಕೊಹ್ಲಿ 1397 ರನ್ ಕಲೆಹಾಕಿದ್ದಾರೆ(PC-PTI).

5 / 7
ಏಕದಿನ ಕ್ರಿಕೆಟ್​ನಲ್ಲಿ ಪ್ರಸ್ತುತ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಕೊಹ್ಲಿ, ಈ ಸರಣಿಯಲ್ಲಿ 81 ರನ್​ಗಳ ಗಡಿ ದಾಟಿದರೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 16,000 ರನ್​ಗಳನ್ನು ಪೂರೈಸಲಿದ್ದಾರೆ(PC-PTI).

6 / 7
ಹಾಗೆಯೇ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ 150 ರನ್ ಕಲೆ ಹಾಕಿದರೆ, ಏಕದಿನ ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುತ್ತಾರೆ. ಪ್ರಸ್ತುತ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಯುವರಾಜ್ ಸಿಂಗ್ 1523 ರನ್ ಹಾಗೂ ಎರಡನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ 1455 ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ(PC-PTI).

7 / 7
ಇನ್ನು ವಿರಾಟ್ ಕೊಹ್ಲಿ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ಎರಡು ಶತಕಗಳನ್ನು ಬಾರಿಸಿದರೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರನೆಂಬ ದಾಖಲೆ ಬರೆಯಲಿದ್ದಾರೆ. ಹಾಗೆಯೇ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಐವತ್ತು ಪ್ಲಸ್ ಸ್ಕೋರ್‌ಗಳನ್ನು ದಾಖಲಿಸಿದ ಆಟಗಾರನಾಗಲು ಕೊಹ್ಲಿ ಕೇವಲ ಒಂದು ಹೆಜ್ಜೆ ದೂರದಲ್ಲಿದ್ದಾರೆ.

Follow Us