Virat Kohli-Rohit Sharma: ವಿಶ್ವ ದಾಖಲೆ ಬರೆಯಲು ಕೊಹ್ಲಿ-ರೋಹಿತ್ ನಡುವೆ 4 ರನ್ಗಳ ಪೈಪೋಟಿ
T20 World Cup 2024: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ 4 ರನ್ ಬಾರಿಸಿದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೆಸರಿಗೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಆದರೆ ಇವರಿಬ್ಬರಲ್ಲಿ ಯಾರು ಈ ವಿಶ್ವ ದಾಖಲೆ ನಿರ್ಮಿಸಲಿದ್ದಾರೆ ಎಂಬುದೇ ಈಗ ಕುತೂಹಲ.