Virat Kohli-Rohit Sharma: ವಿಶ್ವ ದಾಖಲೆ ಬರೆಯಲು ಕೊಹ್ಲಿ-ರೋಹಿತ್ ನಡುವೆ 4 ರನ್​ಗಳ ಪೈಪೋಟಿ

|

Updated on: Jun 19, 2024 | 12:21 PM

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ 4 ರನ್​ ಬಾರಿಸಿದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೆಸರಿಗೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಆದರೆ ಇವರಿಬ್ಬರಲ್ಲಿ ಯಾರು ಈ ವಿಶ್ವ ದಾಖಲೆ ನಿರ್ಮಿಸಲಿದ್ದಾರೆ ಎಂಬುದೇ ಈಗ ಕುತೂಹಲ.

1 / 5
ಟಿ20ಐ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಬರೆಯಲು ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಅಗ್ರಸ್ಥಾನಕ್ಕೇರಲು ಇಬ್ಬರು ದಿಗ್ಗಜರಿಗೆ ಬೇಕಿರುವುದು ಕೇವಲ 4 ರನ್​ಗಳು ಮಾತ್ರ ಎಂಬುದು ವಿಶೇಷ.

2 / 5
ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಹೆಸರಿನಲ್ಲಿದೆ. ಬಾಬರ್ 116 ಇನಿಂಗ್ಸ್​ಗಳಿಂದ ಒಟ್ಟು 4145 ರನ್​ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ.

3 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. 112 ಟಿ20 ಇನಿಂಗ್ಸ್​ಗಳಿಂದ ಕಿಂಗ್ ಕೊಹ್ಲಿ ಈವರೆಗೆ 4042 ರನ್ ಪೇರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದ್ದು, 146 ಇನಿಂಗ್ಸ್​ಗಳಿಂದ ಹಿಟ್​ಮ್ಯಾನ್ ಇದುವರೆಗೆ 4042 ರನ್​ ಕಲೆಹಾಕಿದ್ದಾರೆ.

5 / 5
ಅಂದರೆ ಇಲ್ಲಿ ಬಾಬರ್ ಆಝಂ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯಲು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಕೇವಲ 4 ರನ್​ಗಳ ಅವಶ್ಯಕತೆಯಿದೆ. ಈ ನಾಲ್ಕು ರನ್​ಗಳೊಂದಿಗೆ ಟಿ20 ಕ್ರಿಕೆಟ್​ನ ರನ್ ಸರದಾರನ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವವರು ಯಾರು ಎಂಬುದೇ ಈಗ ಕುತೂಹಲ.