Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದು ವಿಶ್ವದಾಖಲೆ ಬರೆದ ರೋಹಿತ್- ಕೊಹ್ಲಿ

Virat Kohli- Rohit Sharma: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ, ವಿರಾಟ್ ಕೋಹ್ಲಿ ಮತ್ತು ರೋಹಿತ್ ಶರ್ಮಾ ಅತಿ ಹೆಚ್ಚು ಐಸಿಸಿ ಫೈನಲ್‌ಗಳನ್ನು ಆಡಿದ ಆಟಗಾರರಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಯುವರಾಜ್ ಸಿಂಗ್ ಅವರನ್ನು ಹಿಂದಿಕ್ಕಿರುವ ಈ ಜೋಡಿ ಇದುವರೆಗೆ 9 ಐಸಿಸಿ ಫೈನಲ್‌ಗಳಲ್ಲಿ ಆಡಿದ್ದಾರೆ.

ಪೃಥ್ವಿಶಂಕರ
|

Updated on: Mar 09, 2025 | 8:01 PM

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಚಾಂಪಿಯನ್ಸ್ ಟ್ರೋಫಿ 2025 ರ ಅಂತಿಮ ಪಂದ್ಯ ದುಬೈನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 251 ರನ್​ಗಳ ಟಾರ್ಗೆಟ್ ನೀಡಿದೆ. ಕಿವೀಸ್ ಪರ ಡ್ಯಾರೆಲ್ ಮಿಚೆಲ್ ಹಾಗೂ ಬ್ರೇಸ್​ವೆಲ್ ಅರ್ಧಶತಕಗಳ ಇನ್ನಿಂಗ್ಸ್‌ ಆಡಿದರು.

1 / 5
ಆದರೆ ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದ ಮಾಜಿ ನಾಯಕ ಹಾಗೂ ಹಾಲಿ ನಾಯಕರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇತಿಹಾಸ ನಿರ್ಮಿಸಿದರು. ಈ ಇಬ್ಬರೂ ಆಟಗಾರರು ಈಗ ವಿಶ್ವದಲ್ಲೇ ಅತಿ ಹೆಚ್ಚು ಐಸಿಸಿ ಫೈನಲ್‌ಗಳನ್ನು ಆಡಿದ ಆಟಗಾರರೆಂಬ ದಾಖಲೆ ಬರೆದಿದ್ದಾರೆ.

2 / 5
ಈ ಮೂಲಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ, ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಸಹ ಹಿಂದಿಕ್ಕಿದ್ದಾರೆ. ಭಾರತಕ್ಕೆ ಎರಡೆರಡು ವಿಶ್ವಕಪ್‌ಗಳನ್ನು ಗೆಲ್ಲಿಸಿಕೊಟ್ಟಿದ್ದ ಯುವರಾಜ್ ಸಿಂಗ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 8 ಐಸಿಸಿ ಫೈನಲ್‌ಗಳನ್ನು ಆಡಿದ್ದಾರೆ.

3 / 5
ಭಾರತವನ್ನು ಹೊರತುಪಡಿಸಿ ವಿಶ್ವದಲ್ಲಿ ಅತಿ ಹೆಚ್ಚು ಐಸಿಸಿ ಫೈನಲ್‌ಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜಂಟಿಯಾಗಿ ಮೊದಲ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇದುವರೆಗೆ ಭಾರತ ಪರ 9 ಐಸಿಸಿ ಫೈನಲ್ ಪಂದ್ಯಗಳನ್ನು ಆಡಿದ್ದಾರೆ.

4 / 5
ಇನ್ನು ಅತಿ ಹೆಚ್ಚು ಐಸಿಸಿ ಫೈನಲ್‌ಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೊದಲೆರಡು ಸ್ಥಾನಗಳಲ್ಲಿ ಇದ್ದರೆ, ಇದೀಗ ಯುವರಾಜ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಇದಲ್ಲದೆ, ರವೀಂದ್ರ ಜಡೇಜಾ 8 ಫೈನಲ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐದನೇ ಸ್ಥಾನದಲ್ಲಿ ಕುಮಾರ್ ಸಂಗಕ್ಕಾರ ಮತ್ತು ಆರನೇ ಸ್ಥಾನದಲ್ಲಿ ಮಹೇಲ್ ಜಯವರ್ಧನೆ ತಲಾ 7 ಫೈನಲ್‌ಗಳೊಂದಿಗೆ ಪಟ್ಟಿಯಲ್ಲಿದ್ದಾರೆ.

5 / 5
Follow us