AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನದಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ರೋಹಿತ್, ಕೊಹ್ಲಿ..!

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ಸೆ. 27ರಿಂದ ಆರಂಭವಾಗಲಿದೆ. ಈ ಸರಣಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶೇಷ. ಕೊಹ್ಲಿ 15,000 ODI ರನ್‌ಗಳ ಸನಿಹದಲ್ಲಿದ್ದರೆ, ರೋಹಿತ್ 12,000 ರನ್‌ಗಳ ಕ್ಲಬ್ ಸೇರಲು ಸಜ್ಜಾಗಿದ್ದಾರೆ. ಈ ಇಬ್ಬರು ಸ್ಟಾರ್ ಆಟಗಾರರ ಐತಿಹಾಸಿಕ ಮೈಲಿಗಲ್ಲುಗಳ ನಿರೀಕ್ಷೆ ಸರಣಿಯ ಹೈಲೈಟ್ ಆಗಲಿದೆ.

ಪೃಥ್ವಿಶಂಕರ
|

Updated on:Sep 25, 2026 | 3:40 PM

Share
 ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಸಜ್ಜಾಗಿದೆ. ಎರಡೂ ತಂಡಗಳ ನಡುವಿನ ಸರಣಿ ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗಲಿದೆ. ಈ ಏಕದಿನ ಸರಣಿಯು ಭಾರತ ತಂಡಕ್ಕೆ ಮಾತ್ರವಲ್ಲದೆ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೂ ಬಹಳ ವಿಶೇಷವಾಗಿರುತ್ತದೆ(PC-BCCI x).

1 / 5
ಟೀಂ ಇಂಡಿಯಾದ ರನ್ ಮೆಷಿನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ತಲುಪಲು ಒಂದು ಹೆಜ್ಜೆ ದೂರದಲ್ಲಿದ್ದಾರೆ. ಕೊಹ್ಲಿ ಇದುವರೆಗೆ 314 ಏಕದಿನ ಪಂದ್ಯಗಳಲ್ಲಿ 14,941 ರನ್ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ 15,000 ರನ್‌ಗಳ ಗಡಿ ತಲುಪಲು ಅವರಿಗೆ ಕೇವಲ 59 ರನ್‌ಗಳು ಬೇಕಾಗಿವೆ(PC-BCCI x).

2 / 5
ವೆಸ್ಟ್ ಇಂಡೀಸ್ ವಿರುದ್ಧದ ಈ ಸರಣಿಯ ಮೊದಲ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ನಂತರ ಈ ಸಾಧನೆ ಮಾಡಿದ ಎರಡನೇ ವಿಶ್ವ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಅವರು ಇತಿಹಾಸ ಸೃಷ್ಟಿಸಲಿದ್ದಾರೆ(PC-BCCI x).

3 / 5
ಮತ್ತೊಂದೆಡೆ, ಭಾರತದ ಡ್ಯಾಶಿಂಗ್ ಓಪನರ್ ರೋಹಿತ್ ಶರ್ಮಾ ಕೂಡ ಮತ್ತೊಂದು ಅದ್ಭುತ ದಾಖಲೆಯ ಹತ್ತಿರದಲ್ಲಿದ್ದಾರೆ. ರೋಹಿತ್ ಇದುವರೆಗೆ 288 ಏಕದಿನ ಪಂದ್ಯಗಳಲ್ಲಿ 11,895 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 12,000 ರನ್‌ಗಳ ಕ್ಲಬ್‌ಗೆ ಸೇರಲು ಅವರಿಗೆ ಇನ್ನೂ 105 ರನ್‌ಗಳು ಬೇಕಾಗಿವೆ(PC-BCCI x).

4 / 5
ಇಲ್ಲಿಯವರೆಗೆ, ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಕೇವಲ ಆರು ಬ್ಯಾಟ್ಸ್‌ಮನ್‌ಗಳು ಮಾತ್ರ 12,000 ಕ್ಕೂ ಹೆಚ್ಚು ಏಕದಿನ ರನ್‌ಗಳನ್ನು ಗಳಿಸಿದ್ದಾರೆ. ಈಗ, ರೋಹಿತ್ ಶರ್ಮಾ ಕೂಡ ಆ ಪಟ್ಟಿಗೆ ಸೇರಲು ಸಜ್ಜಾಗಿದ್ದಾರೆ.ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್, ಕೊಹ್ಲಿ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರಿಸಿ ಈ ದಾಖಲೆಗಳನ್ನು ಸಾಧಿಸಿದರೆ, ಈ ಸರಣಿಯು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ದಾಖಲಾಗಲಿದೆ(PC-BCCI x).

5 / 5

Published On - 3:38 pm, Fri, 25 September 26

ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Follow Us
ರಾಮನಗರದಲ್ಲಿ ಕುಡಿಯುವ ನೀರಿನ ಬಿಲ್ ಶಾಕ್
ರಾಮನಗರದಲ್ಲಿ ಕುಡಿಯುವ ನೀರಿನ ಬಿಲ್ ಶಾಕ್
ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಬೆಂಬಲ; ದಿನಸಿ ವಿತರಣೆ

ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ

ಮತ್ತಿಬ್ಬರು ಆಶಾ ಕಾರ್ಯಕರ್ತೆಯರು ಆಸ್ಪತ್ರೆಗೆ:ಈವರೆಗೆ 20 ಮಂದಿ ಅಸ್ವಸ್ಥ

ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ

ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು

ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ

ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ

ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ

ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ