T20 World Cup 2024: ಟಿ20ಯಲ್ಲಿ ಆರಂಭಿಕರಾಗಿ ಕೊಹ್ಲಿ- ರೋಹಿತ್ ಪ್ರದರ್ಶನ ಹೇಗಿದೆ?

|

Updated on: Jun 02, 2024 | 10:28 PM

T20 World Cup 2024: ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಪ್ರಶ್ನೆಗೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಅದರಲ್ಲೂ ರೋಹಿತ್ ಶರ್ಮಾ ಜೊತೆ ಓಪನರ್ ಯಾರು? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಸದ್ಯಕ್ಕೆ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

1 / 6
9ನೇ ಆವೃತ್ತಿಯ ಟಿ20 ವಿಶ್ವಕಪ್ ಇಂದಿನಿಂದ ಆರಂಭವಾಗಿದೆ. ಈ ಮಿನಿ ವಿಶ್ವಸಮರದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲ್ಲಿದೆ. ಜೂನ್ 5 ರಂದು ನ್ಯೂಯಾರ್ಕ್‌ನ ನಸ್ಸೌ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

2 / 6
ಆದರೆ ಈ ಟೂರ್ನಿಯಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಪ್ರಶ್ನೆಗೆ ಇದುವರೆಗೂ ಉತ್ತರ ಸಿಕ್ಕಿಲ್ಲ. ಅದರಲ್ಲೂ ರೋಹಿತ್ ಶರ್ಮಾ ಜೊತೆ ಓಪನರ್ ಯಾರು? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಸದ್ಯಕ್ಕೆ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

3 / 6
ಇದಕ್ಕೆ ಪೂರಕವಾಗಿ ಕೊನೆಯ ಬಾರಿಗೆ ಟಿ20 ಮಾದರಿಯಲ್ಲಿ ಇವರಿಬ್ಬರು ಆರಂಭಿಕರಾಗಿ ಕಣಕ್ಕಿಳಿದಿದ್ದಾಗ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಇಬ್ಬರು ಕೂಡ ತಲಾ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದಿದ್ದರು.

4 / 6
ವಾಸ್ತವವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಇವರಿಬ್ಬರು ಕೊನೆಯ ಬಾರಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 224 ರನ್ ಕಲೆಹಾಕಿತ್ತು.

5 / 6
ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ 80 ರನ್ ಕಲೆಹಾಕಿದ್ದರೆ, ರೋಹಿತ್ ಶರ್ಮಾ 34 ಎಸೆತಗಳಲ್ಲಿ 64 ರನ್​ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು.

6 / 6
ವಾಸ್ತವವಾಗಿ ಈ ಬಾರಿಯ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾವನ್ನು ಪ್ರಕಟಿಸಿದ್ದಾಗ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿತ್ತು. ಆದರೀಗ ಆರಂಭಿಕರಾಗಿ ವಿರಾಟ್ ಕೊಹ್ಲಿ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ತೆರೆಯುವ ಅವಕಾಶವನ್ನು ಯಾವ ಬ್ಯಾಟ್ಸ್‌ಮನ್ ಪಡೆಯುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ