- Kannada News Photo gallery Cricket photos Virat Kohli set to spend a month with family in Paris to avoid cricket Kohli will now return to the Asia Cup
Virat Kohli: ಕ್ರಿಕೆಟ್ಗೆ ಬ್ರೇಕ್; ಮಡದಿಯೊಂದಿಗೆ ಈ ರೊಮ್ಯಾಂಟಿಕ್ ಸಿಟಿಯಲ್ಲಿ ಒಂದು ತಿಂಗಳು ಕಳೆಯಲಿದ್ದಾರೆ ಕೊಹ್ಲಿ
Virat Kohli: ಇಂಗ್ಲೆಂಡ್ ಪ್ರವಾಸದಲ್ಲೂ ಕೊಹ್ಲಿ ಬ್ಯಾಟ್ ಕೆಲಸ ಮಾಡಲಿಲ್ಲ. ಭಾರತ ತಂಡ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ ಆದರೆ ಕೊಹ್ಲಿ ಕ್ರಿಕೆಟ್‌ನಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.
Updated on:Aug 13, 2022 | 3:42 PM

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಕೆಟ್ಟ ಫಾರ್ಮ್‌ನಿಂದಾಗಿ ಇತ್ತೀಚಿನ ದಿನಗಳಲ್ಲಿ ಚರ್ಚೆಯಲ್ಲಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲೂ ಕೊಹ್ಲಿ ಬ್ಯಾಟ್ ಕೆಲಸ ಮಾಡಲಿಲ್ಲ. ಭಾರತ ತಂಡ ಈಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ ಆದರೆ ಕೊಹ್ಲಿ ಕ್ರಿಕೆಟ್‌ನಿಂದ ಬ್ರೇಕ್ ತೆಗೆದುಕೊಂಡಿದ್ದಾರೆ.

ಇಂಗ್ಲೆಂಡ್ ಪ್ರವಾಸದ ಕೊನೆಯಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ಲಂಡನ್‌ನಿಂದ ಪ್ಯಾರಿಸ್‌ಗೆ ತೆರಳಿದರು. ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಹೋಟೆಲ್ ಕೋಣೆಯ ಚಿತ್ರವನ್ನು ಹಂಚಿಕೊಂಡ ಅವರು 'ಪ್ಯಾರಿಸ್' ಎಂದು ಬರೆದುಕೊಂಡಿದ್ದಾರೆ.

ಕೊಹ್ಲಿ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡು ಪ್ಯಾರಿಸ್‌ನಲ್ಲಿ ಕುಟುಂಬದೊಂದಿಗೆ ಒಂದು ತಿಂಗಳು ಕಳೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಅವರು ಕ್ರಿಕೆಟ್‌ನಿಂದ ದೂರ ಉಳಿದು ಕುಟುಂಬದೊಂದಿಗೆ ಇರಲಿದ್ದಾರೆ. ಇದರಿಂದ ಅವರಿಗೂ ಒತ್ತಡ ಕಡಿಮೆಯಾಗಲಿದೆ.

ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 70 ಶತಕಗಳನ್ನು ಗಳಿಸಿದ್ದಾರೆ. ಆದರೆ, 2019 ರಿಂದ ಇಲ್ಲಿಯವರೆಗೆ ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕ ಬಂದಿಲ್ಲ. ಅದೇ ಸಮಯದಲ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಬ್ಯಾಟ್ ಕೆಲಸ ಮಾಡಲಿಲ್ಲ. ಇದೇ ವೇಳೆ ಅನುಭವಿ ಆಟಗಾರರು ಕೊಹ್ಲಿಯನ್ನು ತಂಡದಿಂದ ಕೈಬಿಡುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಕೊಹ್ಲಿ ಒಂದು ತಿಂಗಳ ಕಾಲ ವಿರಾಮ ತೆಗೆದುಕೊಂಡಿದ್ದಾರೆ.

ಕೊಹ್ಲಿ ಈಗ ನೇರವಾಗಿ ಏಷ್ಯಾಕಪ್‌ಗೆ ಮರಳಲಿದ್ದಾರೆ. ಏತನ್ಮಧ್ಯೆ, ಭಾರತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ODI ಮತ್ತು ಐದು T20I ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ ಜಿಂಬಾಬ್ವೆಗೂ ಪ್ರಯಾಣ ಬೆಳೆಸಲಿದ್ದಾರೆ. ಏಷ್ಯಾಕಪ್ ಆಗಸ್ಟ್ 27ರಿಂದ ನಡೆಯಲಿದೆ.
Published On - 10:17 pm, Thu, 21 July 22




