AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊಹ್ಲಿಯ ಸಿಡಿಲಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

Virat Kohli Records: ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿರುವುದು ವಿಶೇಷ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Edited By: |

Updated on:Dec 10, 2022 | 4:59 PM

Share
ಚಟ್ಟೋಗ್ರಾಮ್​ನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಯುವ ಬ್ಯಾಟರ್ ಇಶಾನ್ ಕಿಶನ್ ದ್ವಿಶತಕ ಬಾರಿಸಿದರೆ, ಹಿರಿಯ ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದರು.

1 / 6
91 ಎಸೆತಗಳನ್ನು ಎದುರಿಸಿದ್ದ ಕಿಂಗ್ ಕೊಹ್ಲಿ 2 ಭರ್ಜರಿ ಸಿಕ್ಸರ್ ಹಾಗೂ 11 ಫೋರ್​ನೊಂದಿಗೆ 113 ರನ್​ ಕಲೆಹಾಕಿ ಔಟಾದರು. ಆದರೆ ಈ ಶತಕದೊಂದಿಗೆ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿರುವುದು ವಿಶೇಷ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 6
ಅತ್ಯಧಿಕ ಶತಕ: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ 71 ಶತಕ ಬಾರಿಸಿದ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 2ನೇ ಸ್ಥಾನದಲ್ಲಿದ್ದರು. ಇದೀಗ 72 ಶತಕ ಬಾರಿಸಿ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

3 / 6
ಬಾಂಗ್ಲಾ ವಿರುದ್ಧ ಅತ್ಯಧಿಕ ರನ್: ಬಾಂಗ್ಲಾದೇಶ್ ತಂಡದ ವಿರುದ್ಧ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಬಾಂಗ್ಲಾ ವಿರುದ್ಧ 1000 ರನ್ ಪೂರೈಸುವ ಮೂಲಕ ಈ ಸಾಧನೆ ಮಾಡಿದ್ದಾರೆ.

4 / 6
ಅತ್ಯಧಿಕ ಫೋರ್: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಫೋರ್ ಬಾರಿಸಿದ ಪಟ್ಟಿಯಲ್ಲಿದ್ದ ಆಸ್ಟ್ರೇಲಿಯಾದ ಆ್ಯಡಂ ಗಿಲ್​ಕ್ರಿಸ್ಟ್ (1,162) ಅವರನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಅಲ್ಲದೆ 1,172 ಫೋರ್​ನೊಂದಿಗೆ ಅತ್ಯಧಿಕ ಫೋರ್​ ಬಾರಿಸಿದ ವಿಶ್ವದ ಐದನೇ ಬ್ಯಾಟ್ಸ್​ಮನ್ ಆಗಿ ಹೊರಹೊಮ್ಮಿದ್ದಾರೆ.

5 / 6
ಕಡಿಮೆ ಇನಿಂಗ್ಸ್ ದಾಖಲೆ: ಬಾಂಗ್ಲಾ ವಿರುದ್ಧದ ಶತಕದೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 44 ಸೆಂಚುರಿ ಪೂರೈಸಿದ್ದಾರೆ. ವಿಶೇಷ ಎಂದರೆ ಸಚಿನ್ ತೆಂಡೂಲ್ಕರ್​ಗಿಂತ ಕಡಿಮೆ ಇನಿಂಗ್ಸ್​ಗಳಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದಾರೆ. ಸಚಿನ್ ತೆಂಡೂಲ್ಕರ್ ತಮ್ಮ 418ನೇ ಇನ್ನಿಂಗ್ಸ್‌ನಲ್ಲಿ 44ನೇ ಏಕದಿನ ಶತಕ ದಾಖಲಿಸಿದರೆ, ವಿರಾಟ್ ಕೊಹ್ಲಿ 256ನೇ ಇನಿಂಗ್ಸ್​ನಲ್ಲೇ ಈ ಸಾಧನೆ ಮಾಡಿದ್ದಾರೆ.

6 / 6

Published On - 4:59 pm, Sat, 10 December 22

Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ