- Kannada News Photo gallery Cricket photos Virat Kohli, Siraj express their heartfelt condolences over the Pahalgam attack
ಎಲ್ಲರ ಚಿತ್ತ ಪಹಲ್ಗಾಮ್ನತ್ತ… ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ
Pahalgam attack: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಉಗ್ರರು ಅಟ್ಟಹಾಸ ಮರೆದಿದ್ದಾರೆ. ಉಗ್ರರ ಈ ರಕ್ತದಾಹಕ್ಕೆ 26 ಭಾರತೀಯರು ಅಸುನೀಗಿದ್ದಾರೆ. ಅಲ್ಲದೆ ಅನೇಕರು ಗಾಯಗೊಂಡಿದ್ದಾರೆ. ಈ ಹೀನಾಯ ಕೃತ್ಯವನ್ನು ಖಂಡಿಸಿ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್ ಸೇರಿದಂತೆ ಅನೇಕು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರ.
Updated on: Apr 23, 2025 | 1:54 PM

ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದಾಗಿ (Terror Attack) 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಸೋಷಿಯಲ್ ಮೀಡಿಯಾ ಪೋಸ್ಟ್ಗಳನ್ನು ಹಂಚಿಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಈ ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಈ ದಾಳಿ ಕುರಿತಾಗಿ ಟೀಮ್ ಇಂಡಿಯಾ ಆಟಗಾರ ಮೊಹಮ್ಮದ್ ಸಿರಾಜ್ ಕೂಡ ಇನ್ಸ್ಟಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, All Eyes on pahalgam ಎಂಬ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ದಾಳಿಯ ಸುದ್ದಿಯಿಂದ ಆಘಾತವಾಗಿದೆ. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲೋಣ. ಮೃತರ ಮತ್ತು ಅವರ ಕುಟುಂಬಗಳಿಗೆ ಶಕ್ತಿ ಮತ್ತು ನ್ಯಾಯಕ್ಕಾಗಿ ಪ್ರಾರ್ಥಿಸೋಣ ಎಂದು ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇನ್ನು ಈ ದಾಳಿಯನ್ನು ಖಂಡಿಸಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಪಹಲ್ಗಾಮ್‌ನ ಸುದ್ದಿಯಿಂದ ಆಘಾತಗೊಂಡಿದ್ದೇನೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪರ ನಿಲ್ಲುವೆ ಎಂದು ಬರೆದುಕೊಂಡಿದ್ದಾರೆ.









