ICC T20I Rankings: ನಾಯಕತ್ವ ತೊರೆದ ಕಿಂಗ್ ಕೊಹ್ಲಿಗೆ ಹಿಂಬಡ್ತಿ! ಐದನೇ ಸ್ಥಾನಕ್ಕೆ ಜಿಗಿದ ಕನ್ನಡಿಗ ರಾಹುಲ್
TV9 Web | Updated By: ಪೃಥ್ವಿಶಂಕರ
Updated on:
Nov 10, 2021 | 2:43 PM
ICC T20I Rankings: ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಟಾಪ್-10ರಲ್ಲಿರುವ ಆಟಗಾರರ ಪೈಕಿ ಅತಿ ಹೆಚ್ಚು ಹಿನ್ನಡೆ ಅನುಭವಿಸಿದ್ದಾರೆ. 698 ಅಂಕಗಳೊಂದಿಗೆ ನಾಲ್ಕು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.
1 / 7
ಐಸಿಸಿ ಬುಧವಾರ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕವನ್ನು ಪ್ರಕಟಿಸಿದ್ದು, ಭಾರತಕ್ಕೆ ಇದರಲ್ಲಿ ಸಂತಸ ಮೂಡಿದ್ದರೆ, ದೊಡ್ಡ ನಿರಾಸೆಯೂ ಎದುರಾಗಿದೆ. ಈ ಶ್ರೇಯಾಂಕದಲ್ಲಿ ಭಾರತದ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಲಾಭ ಪಡೆದಿದ್ದು, ನಾಯಕ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದ್ದಾರೆ. ದಕ್ಷಿಣ ಆಫ್ರಿಕಾ ಹೆಚ್ಚು ಲಾಭ ಪಡೆದಿದೆ. ಆದರೆ ದಕ್ಷಿಣ ಆಫ್ರಿಕಾ ಮತ್ತು ಭಾರತ ಎರಡೂ ತಂಡಗಳು ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ.
2 / 7
ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ 194 ರನ್ ಗಳಿಸಿದ ಓಪನರ್ ಕೆಎಲ್ ರಾಹುಲ್, ಶ್ರೇಯಾಂಕದಲ್ಲಿ ಮೂರು ಸ್ಥಾನಗಳನ್ನು ಗಳಿಸಿ 727 ಅಂಕಗಳೊಂದಿಗೆ ಎಂಟನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿದ್ದಾರೆ.
3 / 7
ಟಿ20ಯಲ್ಲಿ ಭಾರತ ತಂಡದ ನಾಯಕತ್ವ ತೊರೆದಿರುವ ವಿರಾಟ್ ಕೊಹ್ಲಿ ಟಾಪ್-10ರಲ್ಲಿರುವ ಆಟಗಾರರ ಪೈಕಿ ಅತಿ ಹೆಚ್ಚು ಹಿನ್ನಡೆ ಅನುಭವಿಸಿದ್ದಾರೆ. 698 ಅಂಕಗಳೊಂದಿಗೆ ನಾಲ್ಕು ಸ್ಥಾನ ಕುಸಿದು ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ವಿಶ್ವಕಪ್‌ನಲ್ಲಿ ಕೊಹ್ಲಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿ ಒಟ್ಟು 68 ರನ್ ಗಳಿಸಿದ್ದರು.
4 / 7
ದಕ್ಷಿಣ ಆಫ್ರಿಕಾದ ರಾಸಿ ವಾನ್ ಡೆರ್ ಡರ್ಸೆ ಹೆಚ್ಚು ಲಾಭ ಪಡೆದಿದ್ದಾರೆ. ಸೂಪರ್-12ರಲ್ಲಿ ಇಂಗ್ಲೆಂಡ್ ವಿರುದ್ಧ 94 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಆರು ಸ್ಥಾನಗಳ ಜಿಗಿತದೊಂದಿಗೆ ಟಾಪ್-10 ಪ್ರವೇಶಿಸಿದ್ದಾರೆ. 669 ಅಂಕಗಳೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.
5 / 7
ದಕ್ಷಿಣ ಆಫ್ರಿಕಾದ ಮತ್ತೊಬ್ಬ ಬ್ಯಾಟ್ಸ್‌ಮನ್ ಏಡೆನ್ ಮಕ್ರಂ ಕೂಡ ಶ್ರೇಯಾಂಕದಲ್ಲಿ ಲಾಭ ಪಡೆದಿದ್ದಾರೆ. ಅವರು 796 ಅಂಕಗಳೊಂದಿಗೆ ಮೂರು ಸ್ಥಾನ ಮೇಲೇರಿ ಮೂರನೇ ಸ್ಥಾನ ಪಡೆದಿದ್ದಾರೆ. ಈ ಬ್ಯಾಟ್ಸ್‌ಮನ್ ಇಂಗ್ಲೆಂಡ್ ವಿರುದ್ಧವೂ ಔಟಾಗದೆ 52 ರನ್‌ಗಳ ಇನ್ನಿಂಗ್ಸ್ ಆಡಿದರು.
6 / 7
ಪಾಕಿಸ್ತಾನದ ನಾಯಕ ಬಾಬರ್ ಅಜಮ್ ನಂಬರ್ ಒನ್ ಸ್ಥಾನದಲ್ಲಿಯೇ ಉಳಿದಿದ್ದಾರೆ. ಇಂಗ್ಲೆಂಡ್‌ನ ಡೇವಿಡ್ ಮಲಾನ್ ಕೂಡ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಒಂದು ಸ್ಥಾನ ಕಳೆದುಕೊಂಡಿದ್ದಾರೆ. ಅವರು ಐದನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಬಂದಿದ್ದಾರೆ.
7 / 7
ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಕೂಡ ಸ್ಥಾನ ಕಳೆದುಕೊಂಡಿದ್ದಾರೆ. ಅವರು ಮೂರನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ನ್ಯೂಜಿಲೆಂಡ್‌ನ ಡೆವೊನ್ ಕಾನ್ವೆ ಏಳನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಒಂಬತ್ತನೇ ಸ್ಥಾನದಲ್ಲಿದ್ದಾರೆ.