AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 9 ಸಾವಿರ ರನ್​ಗಳೊಂದಿಗೆ ಬೇಡದ ದಾಖಲೆಗೆ ಕೊರಳೊಡ್ಡಿದ ವಿರಾಟ್ ಕೊಹ್ಲಿ

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 102 ಎಸೆತಗಳನ್ನು ಎದುರಿಸಿ 70 ರನ್ ಬಾರಿಸಿದ್ದಾರೆ. ಈ ಎಪ್ಪತ್ತು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ 9 ಸಾವಿರ ರನ್​ಗಳ ಮೈಲುಗಲ್ಲು ದಾಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 19, 2024 | 7:53 AM

Share
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 9 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿರುವುದು ಕೇವಲ ನಾಲ್ವರು ಮಾತ್ರ. ಈ ನಾಲ್ವರಲ್ಲಿ ವಿರಾಟ್ ಕೊಹ್ಲಿ ಕೊನೆಯವರು. ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 70 ರನ್ ಬಾರಿಸುವ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ್ದಾರೆ.

1 / 6
ಈ ಸಾಧನೆಯ ಬೆನ್ನಲ್ಲೇ ವಿರಾಟ್ ಕೊಹ್ಲಿ ಹೆಸರಿಗೆ ಬೇಡದ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ. ಅಂದರೆ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ 9000 ರನ್ ಕಲೆಹಾಕಿದ ಬ್ಯಾಟರ್ ಎಂಬ ಹಣೆಪಟ್ಟಿ ಇದೀಗ ಕಿಂಗ್ ಕೊಹ್ಲಿ ಪಾಲಾಗಿದೆ.

2 / 6
ಸಾಮಾನ್ಯವಾಗಿ ಅತೀ ವೇಗವಾಗಿ ರನ್​ಗಳ ಮೈಲುಗಲ್ಲು ದಾಟುವ ಕೊಹ್ಲಿ ಈ ಬಾರಿ ಹಿಂದೆ ಉಳಿದಿದ್ದಾರೆ. ಇದಕ್ಕೆ ಸಾಕ್ಷಿ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿ 196 ಇನಿಂಗ್ಸ್ ಗಳನ್ನು ಆಡಿರುವುದು.

3 / 6
ಅದೇ ರಾಹುಲ್ ದ್ರಾವಿಡ್ 9 ಸಾವಿರ ರನ್ ಕಲೆಹಾಕಲು ತೆಗೆದುಕೊಂಡಿದ್ದು ಕೇವಲ 176 ಇನಿಂಗ್ಸ್ ಗಳನ್ನು ಮಾತ್ರ. ಹಾಗೆಯೇ ಸಚಿನ್ ತೆಂಡೂಲ್ಕರ್ 179 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು. ಇನ್ನು ಸುನಿಲ್ ಗವಾಸ್ಕರ್ 192 ಇನಿಂಗ್ಸ್ ಮೂಲಕ 9 ಸಾವಿರ ರನ್ ಗಳ ಮೈಲುಗಲ್ಲು ದಾಟಿದ್ದರು.

4 / 6
ಆದರೆ ವಿರಾಟ್ ಕೊಹ್ಲಿ 9000 ರನ್ ಗಳನ್ನು ಪೂರೈಸಲು ಬರೋಬ್ಬರಿ 196 ಇನಿಂಗ್ಸ್ ತೆಗೆದುಕೊಂಡಿದ್ದಾರೆ. ಈ ಮೂಲಕ ಭಾರತದ ಪರ ಅತೀ ಹೆಚ್ಚು ಇನಿಂಗ್ಸ್ ಆಡಿ 9 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಬಾರಿಸಿದ 70 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಟಿ20+ಏಕದಿನ+ಟೆಸ್ಟ್) ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 15 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಭಾರತದ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹದಿನೈದು ಸಾವಿರ ರನ್​ಗಳಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​