AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ಸೆಂಚುರಿ ಕ್ರಿಕೆಟ್​ನ 7000ನೇ ಶತಕ..!

Virat Kohli Records: ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪ್ರಚಂಡ ಬ್ಯಾಟಿಂಗ್​ನೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ಅಳಿಸಿ ಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 01, 2025 | 7:24 AM

Share
ಏಕದಿನ ಕ್ರಿಕೆಟ್​​ನಲ್ಲಿ ವಿರಾಟ್ ಕೊಹ್ಲಿಯ (Virat Kohli) ದರ್ಬಾರ್ ಮುಂದುವರೆದಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಕಿಂಗ್ ಕೊಹ್ಲಿ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ಭರ್ಜರಿ ದಾಖಲೆಯನ್ನು ಸಹ ಬರೆದಿದ್ದಾರೆ.

1 / 5
ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 11 ಫೋರ್ ಹಾಗೂ 7 ಸಿಕ್ಸರ್​​ನೊಂದಿಗೆ ಬರೋಬ್ಬರಿ 135 ರನ್ ಚಚ್ಚಿದ್ದರು. ಈ ಭರ್ಜರಿ ಶತಕದೊಂದಿಗೆ ಒಂದೇ ಸ್ವರೂಪದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.

2 / 5
ಅಂದರೆ ಏಕದಿನ, ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸ್ವರೂಪಗಳಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್​​ನಲ್ಲಿ ಬರೋಬ್ಬರಿ 51 ಶತಕ ಸಿಡಿಸಿ ಈ ದಾಖಲೆ ಬರೆದಿದ್ದರು.

3 / 5
ಸೌತ್ ಆಫ್ರಿಕಾ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಒಂದೇ ಸ್ವರೂಪದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 52 ಸೆಂಚುರಿ ಬಾರಿಸಿ ಸಚಿನ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

4 / 5
ವಿಶೇಷ ಎಂದರೆ ವಿರಾಟ್ ಕೊಹ್ಲಿ ಬಾರಿಸಿದ ಈ ಶತಕವು ಅಂತಾರಾಷ್ಟ್ರೀಯ ಕ್ರಿಕೆಟ್​​ನ 7000ನೇ ಸೆಂಚುರಿ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಈವರೆಗೆ ಒಟ್ಟು 7 ಸಾವಿರ ಶತಕಗಳು ಮೂಡಿಬಂದಿವೆ. ಇದರಲ್ಲಿ 7000ನೇ ಶತಕ ಬಾರಿಸಿದ್ದು ವಿರಾಟ್ ಕೊಹ್ಲಿ. ಹೀಗಾಗಿಯೇ ರಾಂಚಿಯಲ್ಲಿ ಕಿಂಗ್ ಕೊಹ್ಲಿ ಬಾರಿಸಿದ ಶತಕ ವಿಶೇಷ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ