AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಟೀಮ್​ಮೇಟ್ಸ್​ಗೆ ವಿರಾಟ್ ಬಿಗ್ ವಾರ್ನಿಂಗ್: ಈ ಬಾರಿ ಸುಲಭವಿಲ್ಲ ಎಂದ ಕಿಂಗ್ ಕೊಹ್ಲಿ!

ಬೆಂಗಳೂರು, ಮಾರ್ಚ್ 21: ಐಪಿಎಲ್ 2026 ಸೀಸನ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ (Royal Challengers Bengaluru) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಂಡದ ಆಟಗಾರರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ ಕೊಹ್ಲಿ, ಈ ಸೀಸನ್ ಇನ್ನಷ್ಟು ಕಠಿಣವಾಗಲಿದೆ ಎಂದು ತಿಳಿಸಿದ್ದಾರೆ.

ಗಣಪತಿ ಶರ್ಮಾ
|

Updated on: Mar 21, 2026 | 11:24 AM

Share
ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

1 / 6
ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ ವಿರುದ್ಧ ಇನ್ನಷ್ಟು ಆಕ್ರಮಣಕಾರಿ ಆಟ ಆಡಲಿವೆ ಎಂದು ಹೇಳಿದ್ದಾರೆ.

2 / 6
ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಪ್ರತಿಯೊಂದು ಸೆಷನ್‌ಗೂ 120 ಪರ್ಸೆಂಟ್ ಕೊಡುಗೆ ನೀಡಬೇಕು. ಈ ಎರಡೂವರೆ ತಿಂಗಳು ನಮ್ಮ ಪಾಲಿಗೆ ಬಹಳ ಮುಖ್ಯ ಎಂದು ತಂಡವನ್ನು ಕೊಹ್ಲಿ ಹುರಿದುಂಬಿಸಿದ್ದಾರೆ.

3 / 6
ಚಾಂಪಿಯನ್ ಆಗಿ ಹೊಸ ಸವಾಲು: ಆರ್‌ಸಿಬಿ ಕಳೆದ ಸೀಸನ್‌ನಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತ್ತು. ಈಗ ಚಾಂಪಿಯನ್ ತಂಡವಾಗಿ ಕಣಕ್ಕಿಳಿಯುತ್ತಿರುವುದರಿಂದ ಒತ್ತಡ ಹೆಚ್ಚಾಗಲಿದೆ. ಈ ಕಾರಣಕ್ಕೇ ಸಹ ಆಟಗಾರರಿಗೆ ಕೊಹ್ಲಿ ಕಿವಿಮಾತು ಹೇಳಿದ್ದಾರೆ.

4 / 6
ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಕೂಡ ಹೊಸ ಆಟಗಾರರ ಸೇರ್ಪಡೆಯಿಂದ ತಂಡ ಮತ್ತಷ್ಟು ಬಲವಾಗಿದೆಯೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2026 ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಲು ಆರ್​​ಸಿಬಿ ಅಣಿಯಾಗುತ್ತಿದೆ ಎಂದು ತಿಳಿಸಿದ್ದಾರೆ.

5 / 6
ಕೊಹ್ಲಿಗೆ ಮತ್ತೊಂದು ಮೈಲುಗಲ್ಲು: ಐಪಿಎಲ್ ಇತಿಹಾಸದಲ್ಲಿ ಈಗಾಗಲೇ 8,661 ರನ್ ಗಳಿಸಿರುವ ಕೊಹ್ಲಿ, ಈ ಸೀಸನ್‌ನಲ್ಲಿ 9,000 ರನ್ ಗಡಿ ದಾಟುವ ಮೊದಲ ಆಟಗಾರನಾಗುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ, ಚಾಂಪಿಯನ್ ಆರ್‌ಸಿಬಿ ಈ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಣಕ್ಕಿಳಿಯಲಿದ್ದು, ಕೊಹ್ಲಿಯ ಪ್ರೋತ್ಸಾಹದ ಹಾಗೂ ಎಚ್ಚರಿಕೆಯ ಮಾತುಗಳು ತಂಡಕ್ಕೆ ಹೊಸ ಉತ್ಸಾಹ ತುಂಬಿದೆ.

6 / 6
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ