Virat Kohli: ಪಾಕ್ ಕ್ರಿಕೆಟಿಗರನ್ನು ಹಿಂದಿಕ್ಕಿದ ಕಿಂಗ್ ಕೊಹ್ಲಿ
Virat Kohli Records: ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ 46 ರನ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 19ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅವರು 21ನೇ ಸ್ಥಾನದಲ್ಲಿದ್ದರು.
Updated on: Jan 04, 2024 | 8:57 AM

ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ (Virat Kohli) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೊಹ್ಲಿ 59 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 46 ರನ್ ಬಾರಿಸಿದರು.

ಈ 46 ರನ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ 19ನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅವರು 21ನೇ ಸ್ಥಾನದಲ್ಲಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ಧ 46 ರನ್ ಬಾರಿಸುವ ಮೂಲಕ ಪಾಕಿಸ್ತಾನ್ ತಂಡದ ಮಾಜಿ ಬ್ಯಾಟರ್ಗಳಾದ ಇಂಝಮಾಮ್ ಉಲ್ ಹಕ್ ಹಾಗೂ ಜಾವೇದ್ ಮಿಯಾಂದಾದ್ ಅವರನ್ನು ಹಿಂದಿಕ್ಕಿದ್ದಾರೆ.

ಇಂಝಮಾಮ್ ಉಲ್ ಹಕ್ 200 ಇನಿಂಗ್ಸ್ಗಳ ಮೂಲಕ 8830 ರನ್ ಕಲೆಹಾಕಿದ್ದರು. ಹಾಗೆಯೇ 189 ಟೆಸ್ಟ್ ಇನಿಂಗ್ಸ್ಗಳ ಮೂಲಕ ಜಾವೇದ್ ಮಿಯಾಂದಾದ್ 8832 ರನ್ ಬಾರಿಸಿದ್ದರು. ಇದೀಗ ಈ ಇಬ್ಬರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಮೇಲೇರಿದ್ದಾರೆ.

ಟೀಮ್ ಇಂಡಿಯಾ ಪರ 190 ಟೆಸ್ಟ್ ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಇದುವರೆಗೆ ಒಟ್ಟು 8836 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಪೇರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 19ನೇ ಸ್ಥಾನದಲ್ಲಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. ಟೆಸ್ಟ್ ಕ್ರಿಕೆಟ್ನಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ಒಟ್ಟು 15921 ರನ್ ಕಲೆಹಾಕಿ ವಿಶ್ವ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದೇವರ ಹೆಸರಿನಲ್ಲಿರುವ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವುದು ಕಷ್ಟಸಾಧ್ಯ ಎಂದೇ ಹೇಳಬಹುದು.



















