AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬೌಂಡರಿ ಬಾರಿಸಿ ಇಂಗ್ಲೆಂಡ್‌ ವಿರುದ್ಧ ವಿಶೇಷ ದಾಖಲೆ ನಿರ್ಮಿಸಿದ ಕೊಹ್ಲಿ

Virat Kohli Surpasses Rahul Dravid: ಕಾರ್ಡಿಫ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕನ್ನಡಿಗ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿದ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಇದು ಅವರ 100ನೇ SENA ದೇಶಗಳ ಏಕದಿನ ಪಂದ್ಯವೂ ಆಗಿದೆ.

ಪೃಥ್ವಿಶಂಕರ
|

Updated on: Jul 16, 2026 | 6:39 PM

Share
ಸುಮಾರು 12 ವರ್ಷಗಳ ನಂತರ ಟೀಂ ಇಂಡಿಯಾ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಪಂದ್ಯವನ್ನಾಡುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಆರಂಭವಾಗಿದ್ದು, ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತಾದರೂ ನಾಯಕ ಗಿಲ್ 31 ರನ್ ಬಾರಿಸಿ ಔಟಾದರು (PC-BCCI).

1 / 5
ಶುಭ್​ಮನ್ ಗಿಲ್ ವಿಕಟ್ ಪತನದ ಬಳಿಕ ಬಂದ ಮಾಜಿ ನಾಯಕ ವಿರಾಟ್ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ತಮ್ಮ ಖಾತೆಯನ್ನು ತೆರೆದರು. ಈ ಬೌಂಡರಿ ಜೊತೆಗೆ ಕೊಹ್ಲಿ ಇಂಗ್ಲೆಂಡ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರನೆಂಬ ದಾಖಲೆಯನ್ನು ನಿರ್ಮಿಸಿದರು. ಈ ಮೂಲಕ ಕನ್ನಡಿಗ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿದರು(PC-BCCI).

2 / 5
ಇಂಗ್ಲೆಂಡ್‌ನಲ್ಲಿ ಮೂರು ಸ್ವರೂಪಗಳಲ್ಲಿ 56 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ ದ್ರಾವಿಡ್ 2,645 ರನ್ ಗಳಿಸಿದ್ದಾರೆ. ಇದರಲ್ಲಿ ಅವರು ಎಂಟು ಶತಕಗಳು ಸೇರಿದಂತೆ 55 ರ ಸರಾಸರಿಯಲ್ಲಿ ರನ್ ಕಲೆಹಾಕಿದ್ದರು. ಈ ಪಂದ್ಯಕ್ಕೂ ಮುನ್ನ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ 74 ಇನ್ನಿಂಗ್ಸ್‌ಗಳನ್ನು ಆಡಿ 40 ಸರಾಸರಿಯಲ್ಲಿ 2,642 ರನ್ ಗಳಿಸಿದ್ದರು(PC-PTI).

3 / 5
ಇದೀಗ ಕಾರ್ಡಿಫ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 75 ನೇ ಇನ್ನಿಂಗ್ಸ್ ಆಡಿದ ಕೊಹ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನಕ್ಕೇರಿದರು. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ 56 ಇನ್ನಿಂಗ್ಸ್‌ಗಳಲ್ಲಿ 2,626 ರನ್ ಗಳಿಸಿದ್ದಾರೆ(PC-BCCI).

4 / 5
ಈ ದಾಖಲೆಯ ಜೊತೆಗೆ ಕೊಹ್ಲಿ ಸೆನಾ ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 100 ಏಕದಿನ ಪಂದ್ಯಗಳನ್ನಾಡಿದ ಸಾಧನೆಯನ್ನು ಮಾಡಿದರು. ಇದು ಇಂಗ್ಲೆಂಡ್‌ನಲ್ಲಿ ಕೊಹ್ಲಿಯ 35 ನೇ ಪಂದ್ಯವಾಗಿದೆ. ಆದಾಗ್ಯೂ, 2014 ರಲ್ಲಿ ಇದೇ ಮೈದಾನದಲ್ಲಿ ಆಡಿದ ಪಂದ್ಯದಲ್ಲಿ ಅವರು ತಮ್ಮ ಖಾತೆಯನ್ನು ತೆರೆಯಲು ವಿಫಲರಾಗಿದ್ದರು(PC-PTI).

5 / 5
Follow Us
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ

ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!

ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ

ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?

ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​