Virat Kohli: ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ಶತಕದ ನಿರೀಕ್ಷೆ

Updated on: Sep 18, 2024 | 11:36 AM

India vs Bangladesh Test: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್​ ಸರಣಿಯು ಗುರುವಾರದಿಂದ ಶುರುವಾಗಲಿದೆ. ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಮೊದಲ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು ಎರಡನೇ ಮ್ಯಾಚ್ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಜರುಗಲಿದೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಶತಕ ಮೂಡಿಬಂದು ವರ್ಷ ಕಳೆದಿವೆ. 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 186 ರನ್ ಬಾರಿಸಿದ ಬಳಿಕ ಕೊಹ್ಲಿ ಪೂರ್ಣ ಪ್ರಮಾಣದಲ್ಲಿ ಟೆಸ್ಟ್​ ಸರಣಿಗಳಲ್ಲಿ ತೊಡಗಿಸಿಕೊಂಡಿಲ್ಲ. ಇದೀಗ ಮತ್ತೆ ವೈಟ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಶತಕ ಮೂಡಿಬಂದು ವರ್ಷ ಕಳೆದಿವೆ. 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 186 ರನ್ ಬಾರಿಸಿದ ಬಳಿಕ ಕೊಹ್ಲಿ ಪೂರ್ಣ ಪ್ರಮಾಣದಲ್ಲಿ ಟೆಸ್ಟ್​ ಸರಣಿಗಳಲ್ಲಿ ತೊಡಗಿಸಿಕೊಂಡಿಲ್ಲ. ಇದೀಗ ಮತ್ತೆ ವೈಟ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಕಿಂಗ್ ಕೊಹ್ಲಿ ಸಜ್ಜಾಗಿದ್ದಾರೆ.

2 / 5

ಈ ಬಾರಿ ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುತ್ತಿರುವುದರಿಂದಲೇ ಕಿಂಗ್ ಕೊಹ್ಲಿಯ ಬ್ಯಾಟ್​ನಿಂದ ಭರ್ಜರಿ ಶತಕಗಳನ್ನು ನಿರೀಕ್ಷಿಸಬಹುದು. ಏಕೆಂದರೆ ಬಾಂಗ್ಲಾ ವಿರುದ್ಧ ಆಡಿದ 6 ಟೆಸ್ಟ್ ಪಂದ್ಯಗಳಿಂದ ವಿರಾಟ್ ಕೊಹ್ಲಿ ಒಟ್ಟು 437 ರನ್ ಕಲೆಹಾಕಿದ್ದಾರೆ. ಈ ವೇಳೆ ದ್ವಿಶತಕವನ್ನು ಸಹ ಬಾರಿಸಿದ್ದಾರೆ.

3 / 5

ಅದರಲ್ಲೂ ತವರಿನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕಿಂಗ್ ಕೊಹ್ಲಿ ಅಬ್ಬರಿಸಿದ ಇತಿಹಾಸವಿದೆ. ಭಾರತದಲ್ಲಿ ನಡೆದ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಕೊಹ್ಲಿ 2 ಶತಕಗಳೊಂದಿಗೆ ಒಟ್ಟು 378 ರನ್ ಬಾರಿಸಿದ್ದಾರೆ.

4 / 5

ಇನ್ನು 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಇನಿಂಗ್ಸ್​ನಲ್ಲಿ 204 ರನ್ ಬಾರಿಸಿ ಮಿಂಚಿದ್ದ ಕೊಹ್ಲಿ, 2019 ರಲ್ಲಿ ನಡೆದ ಪಿಂಕ್ ಬಾಲ್ ಟೆಸ್ಟ್​ನಲ್ಲಿ 136 ರನ್​ ಕಲೆಹಾಕಿದ್ದರು. ಹೀಗಾಗಿಯೇ ಈ ಬಾರಿ ಕೂಡ ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮೂರಂಕಿ ಮೊತ್ತವನ್ನು ನಿರೀಕ್ಷಿಸಬಹುದು.

5 / 5

ಇನ್ನು ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದರೆ, ಟೆಸ್ಟ್ ಕ್ರಿಕೆಟ್​ನಲ್ಲಿ 30 ಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲಿದ್ದಾರೆ. 29 ಶತಕಗಳೊಂದಿಗೆ ಆಸ್ಟ್ರೇಲಿಯಾ ದಂತಕಥೆ ಡಾನ್ ಬ್ರಾಡ್ಮನ್ ದಾಖಲೆಯನ್ನು ಸರಿಗಟ್ಟಿರುವ ಕೊಹ್ಲಿ ಬಾಂಗ್ಲಾ ವಿರುದ್ಧದ ಸರಣಿಯ ಮೂಲಕ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

Loading...
Unable to load recommendations.
Follow Us