Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಟಿ20 ಕ್ರಿಕೆಟ್​ಗೆ ವಿರಾಟ್ ಕೊಹ್ಲಿ ತಾತ್ಕಾಲಿಕ ಬ್ರೇಕ್?

Virat Kohli: 34 ವರ್ಷದ ಕೊಹ್ಲಿ ತಮ್ಮ ಕೆಲಸದ ಹೊರೆಯನ್ನು ನಿಯಂತ್ರಿಸಲು ಬಯಸಿದ್ದು, ಹಾಗೆಯೇ 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 27, 2022 | 4:55 PM

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಿಂದ ಕೆಲ ಕಾಲ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇನ್​ಸೈಡ್​ಸ್ಪೋರ್ಟ್ಸ್​ ವರದಿ ಮಾಡಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

1 / 7
ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಹೆಚ್ಚಿನ ಗಮನಹರಿಸಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದು, ಅದಕ್ಕಾಗಿ ಕೆಲ ಕಾಲ ಚುಟುಕು ಮಾದರಿಯ ಕ್ರಿಕೆಟ್​ನಿಂದ ದೂರ ಉಳಿಯಲು ಬಯಸಿದ್ದಾರೆ. ಹಾಗಾಗಿ ಟೀಮ್ ಇಂಡಿಯಾದ ಟಿ20 ತಂಡಕ್ಕೆ ಆಯ್ಕೆಗೆ ಕೊಹ್ಲಿ ಅಲಭ್ಯರಾಗಲಿದ್ದಾರೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಈ ಎರಡು ಸರಣಿಗಳಲ್ಲಿ ಟೀಮ್ ಇಂಡಿಯಾ ಒಟ್ಟು 6 ಪಂದ್ಯಗಳನ್ನು ಆಡಲಿದ್ದು, ಈ ವೇಳೆ ಕೊಹ್ಲಿ ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 / 7
ವಿರಾಟ್ ಕೊಹ್ಲಿಯ ಅನುಪಸ್ಥಿತಿಯು 2024 ರ ಟಿ20 ವಿಶ್ವಕಪ್‌ಗಾಗಿ ತಂಡವನ್ನು ರಚಿಸುವ ಕೆಲಸ ಆಯ್ಕೆದಾರರಿಗೆ ಸರಳವಾಗಲಿದೆ. ಏಕೆಂದರೆ ಮುಂಬರುವ ಟಿ20 ಸರಣಿಗೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗುವುದು ಬಹುತೇಕ ಖಚಿತ. ಇನ್ನು ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಇದರಿಂದ ಯುವ ಪಡೆಯನ್ನು ಕಣಕ್ಕಿಳಿಸಿ ಹೊಸ ತಂಡ ಕಟ್ಟಲು ಬಿಸಿಸಿಐ ಮುಂದಾಗಲಿದೆ.

4 / 7
ಇದಾಗ್ಯೂ ಮುಂಬರುವ ಏಕದಿನ ವಿಶ್ವಕಪ್​ ಹಿನ್ನೆಲೆಯಲ್ಲಿ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗಳನ್ನು ಆಡಲು ವಿರಾಟ್ ಕೊಹ್ಲಿ ಬಯಸಿದ್ದಾರೆ. ಈ ಸರಣಿಗಳ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಕೂಡ ಆಡಬೇಕಿದೆ.

5 / 7
34 ವರ್ಷದ ಕೊಹ್ಲಿ ತಮ್ಮ ಕೆಲಸದ ಹೊರೆಯನ್ನು ನಿಯಂತ್ರಿಸಲು ಬಯಸಿದ್ದು, ಹಾಗೆಯೇ 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿದ್ದಾರೆ. ಹೀಗಾಗಿ ಅವರು ದೀರ್ಘ ಸ್ವರೂಪಗಳ ಮೇಲೆ ಹೆಚ್ಚು ಗಮನ ಹರಿಸಲು ನಿರ್ಧರಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ಇನ್​ಸೈಡ್​ಸ್ಪೋರ್ಟ್ಸ್​ಗೆ ತಿಳಿಸಿದೆ.

6 / 7
ಒಟ್ಟಿನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಅವರ ಅಲಭ್ಯತೆಯ ನಡುವೆ ಟೀಮ್ ಇಂಡಿಯಾ ಮುಂದಿನ ಟಿ20 ಸರಣಿಗಳಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಒಂದು ವೇಳೆ ಯುವ ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ ಹಿರಿಯರಿಗೆ ಟಿ20 ತಂಡದಿಂದ ಗೇಟ್ ಪಾಸ್ ಸಿಗುವುದು ಖಚಿತ ಎಂದೇ ಹೇಳಬಹುದು.

7 / 7
Follow us