Virat Kohli: ವಿರಾಟ್ ಕೊಹ್ಲಿ ಈಗ ಶೂನ್ಯ ಶೂರ..!

India vs New Zealand, 1st Test: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 9 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಶೂನ್ಯಕ್ಕೆ ಔಟಾಗುವ ಮೂಲಕ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 17, 2024 | 2:10 PM

536 ಪಂದ್ಯಗಳು... 596 ಇನಿಂಗ್ಸ್... 33970 ಎಸೆತಗಳು... ಈ ಎಸೆತಗಳಲ್ಲಿ ವಿರಾಟ್ ಕೊಹ್ಲಿ 38 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೊನ್ನೆ ಸುತ್ತುವ ಮೂಲಕ ವಿರಾಟ್ ಕೊಹ್ಲಿ ಅನಗತ್ಯ ದಾಖಲೆಯೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

1 / 6
ಅಂದರೆ ಸಕ್ರಿಯ ಆಟಗಾರರಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. 596 ಅಂತಾರಾಷ್ಟ್ರೀಯ ಇನಿಂಗ್ಸ್​ ಆಡಿರುವ ಕೊಹ್ಲಿ 38 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಈ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 6
ಇದಕ್ಕೂ ಮುನ್ನ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ನ್ಯೂಝಿಲೆಂಡ್​ನ ಟಿಮ್ ಸೌಥಿ ಅಗ್ರಸ್ಥಾನದಲ್ಲಿದ್ದರು. ಸೌಥಿ 293 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ ಒಟ್ಟು 38 ಬಾರಿ ಸೊನ್ನೆಗೆ ಔಟಾಗಿದ್ದಾರೆ. ಇದೀಗ ಈ ಕಳಪೆ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.

3 / 6
ಇನ್ನು ಸಕ್ರಿಯ ಶೂನ್ಯ ಶೂರರ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. 514 ಅಂತಾರಾಷ್ಟ್ರೀಯ ಇನಿಂಗ್ಸ್​ಗಳಲ್ಲಿ 33 ಬಾರಿ ಸೊನ್ನೆಗೆ ವಿಕೆಟ್ ಒಪ್ಪಿಸಿದ್ದಾರೆ.

4 / 6
ಹಾಗೆಯೇ ಸಕ್ರಿಯ ಶೂನ್ಯ ಸರದಾರರ ಪಟ್ಟಿಯಲ್ಲಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ 4ನೇ ಸ್ಥಾನದಲ್ಲಿದ್ದಾರೆ. 348 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಬೈರ್​ಸ್ಟೋವ್ ಒಟ್ಟು 32 ಬಾರಿ ಸೊನ್ನೆಗೆ ಔಟಾಗಿದ್ದಾರೆ.

5 / 6
ಅಂದಹಾಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. ಇಂಟರ್​ನ್ಯಾಷನಲ್ ಕ್ರಿಕೆಟ್​ನ 328 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಮುರಳೀಧರನ್ ಒಟ್ಟು 59 ಬಾರಿ ಸೊನ್ನೆಗೆ ಔಟಾಗಿದ್ದಾರೆ.

6 / 6
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್